ತಂಬಾಕು ಮಾರಾಟ ಮಾಡುವ ಅಂಗಡಿಗಳ ಟ್ರೇಡ್ ಲೈಸನ್ಸ್ ರದ್ದು ಸೂಚನೆ

ಸರ್ಕಾರದ ಆದೇಶವನ್ನು ಲೆಕ್ಕಿಸದೆ ತಂಬಾಕು ಮಾರಾಟ ಮಾಡುವ ಅಂಗಡಿಗಳ ಟ್ರೈಡ್ ಲೈಸನ್ಸ್ ರದ್ದು ಮಾಡಿ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ತ್ರಿಲೋಕ್ ಚಂದ್ರ ಅವರು ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಮತ್ತು ಕೋಟ್ಪಾ ಕಾಯ್ದೆಯ ಅನುಷ್ಠಾನದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆಯಿತು.
ಕಾರ್ಯಾಚರಣೆ:
ಕೆಲವು ಅಂಗಡಿಗಳವರು ಸರ್ಕಾರದ ಆದೇಶಕ್ಕೆ ಬೆಲೆ ಕೊಡದೆ ತಂಬಾಕು ಮಾರಾಟ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಇಂತಹ ಅಂಗಡಿಗಳ ಟ್ರೇಡ್ ಲೈಸೆನ್ಸ್ ಅನ್ನು ನಗರಸಭೆಯ ಸಹಕಾರದೊಂದಿಗೆ ರದ್ದು ಪಡಿಸಿ. ಈ ಸಂಬಂಧ ಅಂಗಡಿಗಳ ಮೇಲೆ ಕಾರ್ಯಾಚರಣೆ ಮಾಡಿ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ತಂಬಾಕು ನಿಯಂತ್ರಣಾ ಘಟಕದ ನೋಡಲ್ ಅಧಿಕಾರಿ ಡಾ ವಿಜಯಕುಮಾರಿ ಮಾತನಾಡಿ, ಕೋಟ್ಪಾ ಕಾಯ್ದೆ ಉಲ್ಲಂಘನೆ ಮಾಡಿರುವ ಕುರಿತು ಜಿಲ್ಲೆಯಲ್ಲಿ ಸಮಾರು 511 ಕೇಸ್‍ಗಳನ್ನು ದಾಖಲಿಸಲಾಗಿದೆ. ಅದರಂತೆ 55,115 ರೂ. ದಂಡ ಕಟ್ಟಿಸಿಕೊಳ್ಳಲಾಗಿದೆ. ಶಾಲಾ-ಕಾಲೇಜುಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವವರಿಗೆ ದಂಡ ವಿಧಿಸಲಾಗುತ್ತಿದೆ ಎಂದರು.
ಜಿಲ್ಲಾಧಿಕಾರಿ ಡಾ.ಕೆ.ವಿ.ತ್ರಿಲೋಕ್ ಚಂದ್ರ ಅವರು, ತಹಶೀಲ್ದಾರ್ ಅವರ ಕಚೇರಿಯ ಬಳಿ ಯಾವಾಗಲೂ ಸಾರ್ವಜನಿಕ ಸ್ಥಳಗಳಲ್ಲಿ ದೂಮಪಾನ ಮಾಡುತ್ತಿರುತ್ತಾರೆ. ಅಲ್ಲಿನ ಅಂಗಡಿಗಳಲ್ಲಿಯೂ ಮಾರಾಟ ನಡೆಯುತ್ತಿದೆ. ನೀವೇನು ಕ್ರಮ ಕೈಗೊಂಡಿದ್ದೀರಿ. ಎಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದೀರಿ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ತ್ರಿಲೋಕ್ ಚಂದ್ರ ಪ್ರಶ್ನಿಸಿದರು.
ತಂಡಗಳ ರಚನೆ:
ತಂಬಾಕು ನಿಯಂತ್ರಣ ಘಟಕದ ನೋಡಲ್ ಅಧಿಕಾರಿ ಡಾ.ವಿಜಯಕುಮಾರಿ ಮಾತನಾಡಿ, ಸಾರ್ವಜನಿಕ ಸ್ಥಳಗಳಲ್ಲಿ ದೂಮಪಾನ ಮಾಡುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಇದಕ್ಕೆ ತಂಡಗಳನ್ನು ರಚಿಸಿ ಅಂಗಡಿಗಳ ಮೇಲೆ ದಾಳಿ ನಡೆಸಲಾಗುವುದು ಎಂದರು. ಇನ್ನು ಸಾರ್ವಜನಿಕರಿಗೆ ತಂಬಾಕು ನಿಯಂತ್ರಣ ಕುರಿತು ಸಾಕಷ್ಟು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದರು.
ಶಾಲಾ ಕಾಲೇಜುಗಳಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ತಂಬಾಕು ನಿಯಂತ್ರಣಾ ಘಟಕದಿಂದ ನಡೆಸಲಾಗಿದೆ. ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಸುಮಾರು 40 ಕಡೆ ನಾಟಕಗಳನ್ನು ಮಾಡಿಸಲಾಗಿದೆ. ಸುಮಾರು 35 ಮಂದಿ ನಾಟಕದ ಮೂಲಕ ಜಾಗೃತಿ ಮೂಡಿಸುವ ಕೆಲಸ ಮಾಡಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಕೊಟ್ಪಾ ಕಾಯ್ದೆ:
ಜಿಲ್ಲೆಯಾಧ್ಯಂತ ಕೋಟ್ಪಾ ಕಾಯ್ದೆಯನ್ನು ಕಟ್ಟು ನಿಟ್ಟಾಗಿ ಅನುಷ್ಠನಗೊಳಿಸಿ ಪ್ರತಿ ತಿಂಗಳು ವರದಿಯನ್ನು ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಸೂಚನೆ ನೀಡಿದರು. ನಂತರ ಅನಧಿಕೃತ ಪ್ಯಾಕೇಜ್ ಕುಡಿಯುವ ನೀರಿನ ಉತ್ಪಾದನೆ ಮತ್ತು ಮಾರಾಟವನ್ನು ತಡೆಗಟ್ಟುವ ಕುರಿತು ಚರ್ಚಿಸಲಾಗಿ, ಪರವಾನಗಿ ಇಲ್ಲದೆ ನೀರನ್ನು ಮಾರಾಟ ಮಾಡುವವರ ಅಂಗಡಿಗಳ ವಿರುದ್ಧ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಿ ಎಂದು ಆಹಾರ ಸಂರಕ್ಷಣಾಧಿಕಾರಿ ವೆಂಕಟರಾಜು ಅವರಿಗೆ ಸೂಚಿಸಿದರು.

ನೀರಿನ ವಿಚಾರ ಚರ್ಚೆಗೆ ಬಂದಾಗ ಜಿಲ್ಲಾಧಿಕಾರಿಗಳು ಅಲ್ಲಿಯೇ ಇದ್ದ ಬಾಟೆಲ್ ಒಂದನ್ನು ಕೈಯಲ್ಲಿ ಹಿಡಿದು, ಇದಕ್ಕೆ ಪರವಾನಗಿ ಸಿಕ್ಕಿದೆಯೇ ?ಐಎಸ್‍ಐ ಮಾರ್ಕ್ ಇದೆಯೇ ? ಎಂಬುವುದನ್ನು ಗಮನಿಸಿದರು. ಅದೇ ರೀತಿ ಸಭೆಯಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯ ಬಗ್ಗೆ ಚರ್ಚಿಸಲಾಯಿತು. ಸಂಬಂಧ ಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದು ಸಲಹೆ ಸೂಚನೆಗಳನ್ನು ನೀಡಿದರು.

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s