ಮೇ 2 ಮತ್ತು 3 ರಂದು ಸಾಮಾನ್ಯ ಪ್ರವೇಶ ಪರೀಕ್ಷೆ

 

ರಾಜ್ಯದಾದ್ಯಂತ  ಮೇ 2 ಮತ್ತು 3 ರಂದು 2017 ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯ ಪೂರ್ವ ಸಿದ್ದತೆಗಳು ಶುರುವಾಗಿದ್ದು ಈ ಕುರಿತು ಹೆಚ್ಚಿನ ವಿವರ ಹೀಗಿದೆ.

ಮೇ 2 ಮತ್ತು 3 ರಂದು 2017 ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯು ನಡೆಯಲಿದೆ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜರಾಯರೆಡ್ಡಿ ಅವರು ತಿಳಿಸಿದ್ದಾರೆ.

 

ವೇಳಾಪಟ್ಟಿ:

ಮೊದಲಬಾರಿ ಪ್ರಶ್ನೆ ಪತ್ರಿಕೆಯನ್ನು ಕನ್ನಡ ಮತ್ತು ಇಂಗ್ಲೀಷ್ ಮಾಧ್ಯಮದಲ್ಲಿ ಮುದ್ರಿಸಲಾಗುತ್ತಿದೆ. ಮೇ 2 ರಂದು ಬೆಳಿಗ್ಗೆ 10.30 ರಿಂದ 11.50 ರ ವರೆಗೆ ಜೀವಶಾಸ್ತ್ರ,  ಮಧ್ಯಾಹ್ನ 2.30 ರಿಂದ 3.50 ರವರೆಗೆ ಗಣಿತಶಾಸ್ತ್ರ ಹಾಗೂ ಮೇ 3 ರಂದು ಬೆಳಿಗ್ಗೆ 10.30 ರಿಂದ 11.50 ರ ವರೆಗೆ ಭೌತಶಾಸ್ತ್ರ,  ಮಧ್ಯಾಹ್ನ 2.30 ರಿಂದ 3.50 ರವರೆಗೆ ರಸಾಯನ ಶಾಸ್ತ್ರ ಪರೀಕ್ಷೆಗಳು ನಡೆಯಲಿದೆ.

ಹೊರನಾಡು/ಗಡಿನಾಡು ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆಯನ್ನು  ಮೆ. 4 ರಂದು ಬೆಂಗಳೂರು ಕೇಂದ್ರದಲ್ಲಿ ನಡೆಸಲಾಗುವುದು. ಸುಮಾರು 1,800 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದು ಸಚಿವರರು ಹೇಳಿದರು.

ಮಾರ್ಗಸೂಚಿ:

ಅಭ್ಯರ್ಥಿಗಳು ಮೇ 3 ರಂದು ಎರಡನೇ ದಿನದ ಕೊನೆಯ ಅವಧಿಯ ಪರೀಕ್ಷೆ ಮುಗಿದ ನಂತರ ತಮ್ಮ ತಮ್ಮ ಪರೀಕ್ಷಾ ಕೇಂದ್ರಗಳಿಂದ ಬ್ರೋಚರ್ ಅನ್ನು ಪಡೆದುಕೊಳ್ಳಬೇಕು.

ಉತ್ತರಗಳನ್ನು ಓಎಂಆರ್ ಉತ್ತರ ಪತ್ರಿಕೆಯಲ್ಲಿ ಶೇಡ್ ಮಾಡುವುದರ ಮೂಲಕ ಉತ್ತರಿಸಬೇಕಾಗಿರುವುದರಿಂದ, ಅಭ್ಯರ್ಥಿಗಳು ತಮ್ಮ ಜೊತೆಯಲ್ಲಿ ಬ್ಲೂ ಅಥವಾ ಬ್ಲಾಕ್ ಇಂಕ್ ಬಾಲ್ ಪಾಯಿಂಟ್ ಅನ್ನು ತೆಗೆದುಕೊಂಡು ಹೋಗಬೇಕು.

ಅಭ್ಯರ್ಥಿಗಳು ಪರೀಕ್ಷಾ ವೇಳಾಪಟ್ಟಿಯನ್ನು ಗಮನದಲ್ಲಿಟ್ಟುಕೊಳ್ಳುವುದು ಸೂಕ್ತ ಹಾಗೆಯೇ ಪರೀಕ್ಷೆಯ ಮೊದಲನೆ ಬೆಲ್ ಆಗುವ ಅರ್ಧ ಗಂಟೆ ಮುಂಚಿತವಾಗಿ ಪರೀಕ್ಷಾ ಕೇಂದ್ರವನ್ನು ತಲುಪಬೇಕು.

ಪ್ರವೇಶ ಪತ್ರದ ಜೊತೆಯಲ್ಲಿ ಅಭ್ಯರ್ಥಿಯು ಕಡ್ಡಾಯವಾಗಿ ಮಾನ್ಯತೆ ಇರುವ ಯಾವುದಾದರೂ ಒಂದು ಕಾಲೇಜಿನ ಗುರುತಿನ ಚೀಟಿ, 2ನೇ ಪಿ.ಯು.ಸಿ/12ನೇ ತರಗತಿಯ ಪ್ರವೇಶ ಪತ್ರ, ಬಸ್‍ಪಾಸ್, ಡ್ರೈವಿಂಗ್ ಲೈಸೆನ್ಸ್, ಪಾಸ್‍ಪೋರ್ಟ್, ಆಧಾರ್ ಕಾರ್ಡ್, ಪಾನ್ ಕಾರ್ಡ್ ಅನ್ನು ತೆಗೆದುಕೊಂಡು ಹೋಗಬೇಕು.

ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯ ಒಳಗೆ ಯಾವುದೇ ರೀತಿಯ ಕೈಗಡಿಯಾರವನ್ನು ಕಟ್ಟಿಕೊಂಡು/ತೆಗೆದುಕೊಂಡು ಹೋಗುವಂತಿಲ್ಲ. ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯ ಒಳಗೆ ಯಾವುದೇ ಟ್ಯಾಬ್ಲೆಟ್/ಮೊಬೈಲ್/ಕ್ಯಾಲ್ಕ್ಯುಲೇಟರ್‍ಗಳನ್ನು ತರುವಂತಿಲ್ಲ.

 

ವೀಕ್ಷಕರ ನೇಮಕ:

ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಸಹಾಯಕ ಆಯುಕ್ತರನ್ನು ವೀಕ್ಷಕರನ್ನಾಗಿ ನೇಮಕ ಮಾಡಿರುತ್ತಾರೆ.ಒಟ್ಟು 404 ವೀಕ್ಷಕರು, 808 ವಿಶೇಷ ಜಾಗೃತ ದಳದ ಸದಸ್ಯರು, 404 ಪ್ರಶ್ನೆ ಪತ್ರಿಕೆ ಪಾಲಕರು,  ಸುಮಾರು 11,625 ಕೊಠಡಿ ಮೇಲ್ವಿಚಾರಕರು ಹಾಗೂ 32,000 ಅಧಿಕಾರಿ/ಸಿಬ್ಬಂದಿ ವರ್ಗದವರನ್ನು ನೇಮಿಸಲಾಗಿದೆ ಎಂದು ಸಚಿವ ಬಸವರಾಜರಾಯರೆಡ್ಡಿ ಅವರು ತಿಳಿಸಿದರು.

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s