ಕೊಪ್ಪಳ:ಕುಡಿಯುವ ನೀರು ಪೂರೈಕೆ ಕಾಮಗಾರಿ ತ್ವರಿತಕ್ಕೆ ಸೂಚನೆ

ಕುಷ್ಟಗಿ ತಾಲೂಕಿನಲ್ಲಿ ಕುಡಿಯುವ ನೀರಿನ ತೀವ್ರ ಸಮಸ್ಯೆ ಎದುರಿಸುತ್ತಿರುವ ಸಮಸ್ಯಾತ್ಮಕ ಗ್ರಾಮಗಳಿಗೆ ತುರ್ತಾಗಿ ಕುಡಿಯುವ ನೀರು ಪೂರೈಕೆಗಾಗಿ 6. 04 ಕೋಟಿ ರೂ. ಗಳ ಕ್ರಿಯಾ ಯೋಜನೆ ರೂಪಿಸಲಾಗಿದ್ದು, ಕೂಡಲೆ ಕಾಮಗಾರಿ ಪ್ರಾರಂಭಿಸುವಂತೆ ಕೊಪ್ಪಳ ಜಿಲ್ಲಾ ಉಸ್ತುವಾರಿ ಮತ್ತು ಉನ್ನತ ಶಿಕ್ಷಣ ಮಂತ್ರಿಗಳಾದ ಬಸವರಾಜ ರಾಯರಡ್ಡಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕುಷ್ಟಗಿ ತಾಲೂಕಿನ ಬರ ಪರಿಹಾರ ಕಾರ್ಯಗಳ ಕುರಿತು ಕುಷ್ಟಗಿ ಸರ್ಕಿಟ್ ಹೌಸ್‍ನಲ್ಲಿ ಏರ್ಪಡಿಸಲಾಗಿದ್ದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಟ್ಯಾಂಕರ್ ನೀರು:

imagesಕುಷ್ಟಗಿ ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿನ ಕುಡಿಯುವ ನೀರು ಪೂರೈಕೆಯ ಸ್ಥಿತಿ ಗತಿ ಕುರಿತು ವಿವರಣೆ ನೀಡಿದ ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆ ಸಹಾಯಕ ಇಂಜಿನಿಯರ್ ಅರವಿಂದ ಜೋಶಿ ಅವರು, ಕುಷ್ಟಗಿ ತಾಲೂಕಿನಲ್ಲಿ ಕುಡಿಯುವ ನೀರು ಪೂರೈಕೆಗೆ ಸಂಬಂಧಿಸಿದಮತೆ 116 ಗ್ರಾಮಗಳನ್ನು ಸಮಸ್ಯಾತ್ಮಕ ಗ್ರಾಮಗಳನ್ನಾಗಿ ಗುರುತಿಸಲಾಗಿದ್ದು, ಈಗಾಗಲೆ 17 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಅಲ್ಲದೆ ಕುಡಿಯುವ ನೀರಿನ ಮೂಲ ಲಭ್ಯವಾಗದ ಕಾರಣದಿಂದ 35 ಗ್ರಾಮಗಳಲ್ಲಿ 46 ಖಾಸಗಿ ಬೋರ್ ವೆಲ್ ಗಳನ್ನು ಮಾಸಿಕ ಬಾಡಿಗೆ ಆಧಾರದಲ್ಲಿ ಪಡೆದುಕೊಂಡು, ಸಾರ್ವಜನಿಕರಿಗೆ ನೀರು ಪೂರೈಕೆ ಮಾಡಲಾಗುತ್ತಿದೆ ಎಂದರು.

85 ಲಕ್ಷ ರೂ ವೆಚ್ಚ:

ಬರುವ ಮೇ, ಜೂನ್ ಮತ್ತು ಜುಲೈ ಸೇರಿದಂತೆ ಒಟ್ಟು 03 ತಿಂಗಳುಗಳಿಗೆ ಸಮಸ್ಯಾತ್ಮಕ ಗ್ರಾಮಗಳಲ್ಲಿ ಸಮರ್ಪಕ ನೀರು ಪೂರೈಕೆ ಮಾಡುವ ಸಲುವಾಗಿ 6. 04 ಕೋಟಿ ರೂ. ಗಳ ಕ್ರಿಯಾ ಯೋಜನೆ ಸಿದ್ಧವಾಗಿದೆ. ಇದರಲ್ಲಿ ಖಾಸಗಿ ಬೋರ್‍ವೆಲ್ ಮೂಲಕ ನೀರು ಸರಬರಾಜು, ಟ್ಯಾಂಕರ್ ಮೂಲಕ ನೀರು ಪೂರ್ಯಕೆ, ಹೊಸದಾಗಿ ಕೊಳವೆ ಬಾವಿ ಕೊರೆಯಿಸುವುದು, ಅಲ್ಲದೆ ಪೈಪ್‍ಲೈನ್ ಹಾಕಿ ಮೋಟಾರು ಅಳವಡಿಸುವುದು ಹೀಗೆ 314 ಕಾಮಗಾರಿಗಳಿಗೆ 604. 85 ಲಕ್ಷ ರೂ. ಗಳ ಕ್ರಿಯಾ ಯೋಜನೆ ತಯಾರಿಸಲಾಗಿದೆ ಎಂದರು.

ಗುಣ ಮಟ್ಟದ ಪೈಪ್:

ಕ್ರಿಯಾ ಯೋಜನೆಗೆ ಕೂಡಲೆ ಅನುಮೊದನೆ ಪಡೆದು, ಕಾಮಗಾರಿಯನ್ನು ತಕ್ಷಣ ಪ್ರಾರಂಭಿಸಬೇಕು. ಕಾಮಗಾರಿ ಕೈಗೊಳ್ಳುವಾಗ ಉತ್ತಮ ಗುಣಮಟ್ಟದ ಪೈಪ್ ಹಾಗೂ ಉಪಕರಣಗಳನ್ನು ಅಳವಡಿಸಬೇಕು. ಜೆಸ್ಕಾಂ ಅಧಿಕಾರಿಗಳು, ಕುಡಿಯುವ ನೀರು ಯೋಜನೆಗಳಿಗೆ ಕೂಡಲೆ ವಿದ್ಯುತ್ ಸಂಪರ್ಕ ಕಲ್ಪಿಸಬೇಕು. ಸಮಸ್ಯಾತ್ಮಕ ಗ್ರಾಮಗಳ ಪೈಕಿ ಯಾವುದೇ ಗ್ರಾಮಗಳಲ್ಲಿ ಅಗತ್ಯವಿದೆಯೋ, ಅಂತಹ ಗ್ರಾಮಗಳ ಕುಡಿಯುವ ನೀರು ಯೋಜನೆಯನ್ನು ನಿರಂತರ ಜ್ಯೋತಿ ಮಾರ್ಗಕ್ಕೆ ಜೋಡಣೆ ಮಾಡಿಕೊಡಬೇಕು. ಜಿಲ್ಲೆಯಲ್ಲಿ ತೀವ್ರ ಬರ ಪರಿಸ್ಥಿತಿ ಇದ್ದು, ಕುಡಿಯುವ ನೀರು ಪೂರೈಕೆ, ಕೂಲಿಕಾರರಿಗೆ ಉದ್ಯೋಗ, ಜಾನುವಾರುಗಳಿಗೆ ಮೇವು ಒದಗಿಸುವ ವಿಚಾರದಲ್ಲಿ ಇಲ್ಲಿನ ಅಧಿಕಾರಿಗಳು ಮಾನವೀಯ ನೆಲೆಗಟ್ಟಿನಲ್ಲಿ, ಆತ್ಮಸಾಕ್ಷಿಗೆ ಅನುಗುಣವಾಗಿ ಪ್ರಾಮಾಣಿಕ ಕೆಲಸ ಮಾಡಿ ಎಂದು ಸಚಿವರು ಸೂಚನೆ ನೀಡಿದರು.

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s