ಪೊಲೀಸ್ ಬಲವರ್ಧನೆಗೆ ಕ್ರಮ:ಸಚಿವ ಡಾ ಜಿ ಪರಮೇಶ್ವರ್

ರಾಜ್ಯದಲ್ಲಿ ಪೊಲೀಸ್ ಇಲಾಖೆ ಬಲ ಪಡಿಸಲು ಸರ್ಕಾರ ಎಲ್ಲಾ ಕ್ರಮಗಳನ್ನು ಕೈಗೊಂಡಿದೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಅವರು ಹೇಳಿದರು.

ಹಾಸನ ಜಿಲ್ಲೆ ಹಳ್ಳಿ ಮೈಸೂರು ಗ್ರಾಮದಲ್ಲಿ ನೂತನ ಪೋಲೀಸ್ ಠಾಣೆ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು. ಇದೇ ವೇಳೆ ಸಚಿವ ಜಿ.ಪರಮೇಶ್ವರ, ಹಳ್ಳಿ ಮೈಸೂರು ಗ್ರಾಮದಲ್ಲಿ ಏರ್ಪಡಿಸಿದ್ದ ಸಂವಿಧಾನ ಶಿಲ್ಪಿ ಭಾರತ ರತ್ನ ಬಾಬಾ ಸಾಹೇಬ್ ಡಾ ಬಿ ಆರ್ ಅಂಬೇಡ್ಕರ್ ಅವರ ೧೨೬ನೇ ಜನ್ಮ ದಿನಾಚರಣೆ ಕಾರ್ಯಕ್ರಮ ದಲ್ಲಿ ಪಾಲ್ಗೊಂಡರು.

ಡಾ ಬಿ ಆರ್ ಅಂಬೇಡ್ಕರ್ ಅವರು ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಮೂಲಕ ದಲಿತ ಸಮುದಾಯಗಳು ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಅಭಿವೃದ್ಧಿ ಸಾಧಿಸಬೇಕು ಎಂದು ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೀನ ದಲಿತರ ಶ್ರೇಯೋಭಿವೃದ್ದಿಗೆ ಅನೇಕ ಯೋಜನೆಗಳನ್ನು ರೂಪಿಸಿದ್ದು ಅವು ಅರ್ಹರನ್ನು ತಲುಪಬೇಕು ಎಂದು ಸಚಿವರು ಹೇಳಿದರು.
ಏತ ನೀರಾವರಿಗೆ ಅನುದಾನ:
ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಎ. ಮಂಜು ಅವರು ಮಾತನಾಡಿ ರಂಗೇನಹಳ್ಳಿ ಏತ ನೀರಾವರಿ ಯೋಜನೆ ಹಳ್ಳಿ ಮೈಸೂರು ಭಾಗದ ಕೃಷಿಕರಿಗೆ ನೆರವಾಗಲಿದೆ. ಇದಕ್ಕಾಗಿ ಸರ್ಕಾರ ೪೮.೮ ಕೋಟಿ ರೂಪಾಯಿ ಅನುದಾನ ಒದಗಿಸಿದೆ ಎಂದರು. ಹಳ್ಳಿ ಮೈಸೂರಿನಲ್ಲಿ ಪೋಲೀಸ್ ಠಾಣೆ ಆಗಬೇಕೆಂಬ ಬಹುದಿನಗಳ ಕನಸು ಇಂದು ನನಸಾಗಿದೆ ಎಂದು ಹೇಳಿದರು.

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s