ಆರು ಜಿಲ್ಲೆಗಳಲ್ಲಿ ಇಂದ್ರಧನುಷ್ ಅಭಿಯಾನ

ಇಂದ್ರಧನುಷ್ ಅಭಿಯಾನ ಮತ್ತಷ್ಟು ಚುರುಕು ಪಡೆಯುತ್ತಿದೆ. ಮುಂದಿನ ನಾಲ್ಕು ತಿಂಗಳಲ್ಲಿ ಆಯ್ದ ಜಿಲ್ಲೆಗಳಲ್ಲಿ ಕ್ರಮಬದ್ಧವಾಗಿ ಈ ಅಭಿಯಾನ ಶುರುವಾಗಲಿದೆ. ಅಭಿಯಾನಕ್ಕೆ ಈಗಾಗಲೇ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ. ಪೂರ್ಣ ಲಸಿಕೆ ಪಡೆಯದ ಮಕ್ಕಳನ್ನು ಒಳಗೊಂಡು ಇಂದ್ರಧನುಷ್ ಕಾರ್ಯಕ್ರಮಕ್ಕೆ ಒಳಪಡುವ ಕೊಳಚೆ ಮತ್ತು ವಲಸೆ ಪ್ರದೇಶ, ಅಲೆಮಾರಿ ಪ್ರದೇಶ, ಇಟ್ಟಿಗೆ ಕಾರ್ಖಾನೆ, ಕಟ್ಟಡ ನಿರ್ಮಾಣ ಪ್ರದೇಶ ಸೇರಿದಂತೆ ಐದು ಹಂತದಲ್ಲಿ ಕಾರ್ಯಕ್ರಮಗಳನ್ನು ಜಾರಿಗೆ ತರಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ  ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ ಶಾಲಿನಿ ರಜನೀಶ್ ಅವರು ಹೇಳಿದ್ದಾರೆ. ವಿಕಾಸ ಸೌಧದಲ್ಲಿ ಮಾತನಾಡಿದ ಅವರು  ಇನ್ನೂ ಯಾವ ಯಾವ ಅಂಶಗಳನ್ನು ವಿವರಿಸಿದ್ದಾರೆ ಅನ್ನೋ ವಿವರ ಇಲ್ಲಿದೆ.
ನಾಲ್ಕನೇ ಹಂತದ ಇಂದ್ರಧನುಷ್ ಅಭಿಯಾನ ಇದೇ 8 ರಂದು ಆರು ಜಿಲ್ಲೆಗಳಲ್ಲಿ ಆರಂಭವಾಗಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ತಿಳಿಸಿದರು. ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ವಿವರ ನೀಡಿದ ಅವರು ಮಾತನಾಡಿ ಗರ್ಭಿಣಿಯರು, 0-2 ವರ್ಷ ವಯೋಮಾನದ ಒಳಗಿನ ಹಾಗೂ 5 ರಿಂದ 6 ವರ್ಷದ ಅಪೂರ್ಣ ಲಸಿಕೆ ಪಡೆದಿರುವ ಮಕ್ಕಳಿಗೆ ಕಾಲಕಾಲಕ್ಕೆ ಲಸಿಕೆಗಳನ್ನು ನೀಡಲಾಗುವುದು ಎಂದರು.

ಮೇ ತಿಂಗಳ 8 ರಂದು ಬೆಂಗಳೂರು ನಗರದ ಬೃಹತ್ ಬೆಂಗಳೂರು ಮಹಾನಗರಪಾಲಿಕೆ, ಬೆಳಗಾವಿ, ಕಲಬುರಗಿ, ವಿಜಯಪುರ, ಮೈಸೂರು ಮತ್ತು ತುಮಕೂರು ಜಿಲ್ಲೆಗಳಿಗೆ ಹೆಚ್ಚಿನ ಆದ್ಯತೆ ನೀಡಿ, ಗರ್ಭಿಣಿಯರನ್ನು ಪತ್ತೆ ಹಚ್ಚಿ ಲಸಿಕೆ ಹಾಕಲಾಗುವುದು.  ಇಲಾಖೆಯ ಆರೋಗ್ಯ ಕಾರ್ಯಕರ್ತರು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಈ ಕುರಿತು ಹೆಚ್ಚಿನ ತರಬೇತಿ ನೀಡಿ ಸಜ್ಜುಗೊಳಿಸಲಾಗಿದೆ ಎಂದ ಡಾ. ಶಾಲಿನಿ ರಜನೀಶ್ ಅವರು ರಾಜ್ಯ, ಜಿಲ್ಲಾ ಮತ್ತು ನಗರ ಪ್ರದೇಶಗಳಲ್ಲಿ ಕಾರ್ಯಪಡೆ ಸಮಿತಿ ರಚಿಸಿ ಈ ಕುರಿತು ವಿವಿದ ಹಂತಗಳ ಅಧಿಕಾರಿಗಳಿಗೆ ಮಾಹಿತಿ ನೀಡಿ ಸಮನ್ವಯ ಪಡೆದು ಯಶಸ್ವಿಗೊಳಿಸಲಾಗುವುದು ಎಂದರು.


ಮೇ, ಜೂನ್, ಜುಲೈ ಮತ್ತು ಆಗಸ್ಟ್ ಸೇರಿದಂತೆ ನಾಲ್ಕು ತಿಂಗಳ ಕಾಲ ಇಂದ್ರಧನುಷ್ ಅಭಿಯಾನದಡಿ ಸಾರ್ವಜನಿಕ ರಜಾದಿನಗಳನ್ನು ಹೊರತುಪಡಿಸಿ ಲಸಿಕೆಗಳನ್ನು ಹಾಕಲು ವಿಶೇಷ ಕಾರ್ಯಕ್ರಮಗಳನ್ನು ಅಣಿಗೊಳಿಸಲಾಗಿದೆ ಎಂದ ಅವರು ಇಂದ್ರಧನುಷ್ ಕಾರ್ಯಕ್ರಮಕ್ಕೆ ಒಳಪಡುವ ಕೊಳಚೆ ಮತ್ತು ವಲಸೆ ಪ್ರದೇಶ, ಅಲೆಮಾರಿ ಪ್ರದೇಶ, ಇಟ್ಟಿಗೆ ಕಾರ್ಖಾನೆ, ಕಟ್ಟಡ ನಿರ್ಮಾಣ ಪ್ರದೇಶ ಸೇರಿದಂತೆ ಐದು ಹಂತದಲ್ಲಿ ಕಾರ್ಯಕ್ರಮಗಳನ್ನು ಜಾರಿಗೆ ತರಲಾಗುವುದು ಎಂದರು.
ಮೇ ತಿಂಗಳಲ್ಲಿ ಏಳು ದಿನಗಳ ಕಾಲ ಅಂದರೆ 8 ರಿಂದ 19ನೇ ತಾರೀಖಿನ ಒಳಗಾಗಿ ಲಸಿಕೆಗಳನ್ನು ಗರ್ಭಿಣಿ, ಮಕ್ಕಳಿಗೆ ಲಸಿಕೆ ಹಾಕುವ ಕಾರ್ಯಕ್ರಮಗಳು ಪೂರ್ಣಗೊಂಡಿವೆ.  ಇದರ ಜೊತೆಗೆ ವಿವಿಧ ಸರ್ಕಾರೇತರ ಸಂಸ್ಥೆಗಳ ಸಹಕಾರವನ್ನು ಸಹ ಪಡೆಯಲಾಗುವುದು ಎಂದು ಡಾ. ಶಾಲಿನಿ ರಜನೀಶ್ ಅವರು ತಿಳಿಸಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಕೆ.ಆರ್. ರಮೇಶ್ ಅವರು ಮಾತನಾಡಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು. ಇಲಾಖೆಯ ಆಯುಕ್ತರಾದ ಸುಭೋದ್ ಯಾದವ್, ಮಿಷನ್ ಡೈರೆಕ್ಟರ್ ರತನ್ ಕೆಳ್‍ಕರ್ ಅವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.


ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s