ಮೈಸೂರು ಪ್ರವಾಸೋದ್ಯಮಕ್ಕೆ ರಾಷ್ಟ್ರಮಟ್ಟದಲ್ಲಿ ಉತ್ತೇಜನ: ಪ್ರಿಯಾಂಕ್ ಖರ್ಗೆ

5ಮೈಸೂರು ಮೇ. 6 (ಕರ್ನಾಟಕ ವಾರ್ತೆ): ಮೈಸೂರು ಪ್ರವಾಸೋದ್ಯಮವನ್ನು ರಾಷ್ಟ್ರ ಮಟ್ಟದಲ್ಲಿ ಉತ್ತೇಜಿಸಲು ಸರ್ಕಾರ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತದೆ. ಇಲ್ಲಿ ವರ್ಷಪೂರ್ತಿ ನಡೆಯುವ ಕಾರ್ಯಕ್ರಮಗಳು, ಪ್ರವಾಸಿ ತಾಣಗಳ ವಿವರವನ್ನು ಪ್ರವಾಸೋದ್ಯಮದ ಪಾಲುದಾರರು ಒದಗಿಸಬೇಕು ಎಂದು ಪ್ರವಾಸೋದ್ಯಮ ಮತ್ತು ಐಟಿಬಿಟಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಹೇಳಿದರು.

ಶನಿವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮೈಸೂರು ಪ್ರವಾಸೋದ್ಯಮ ಅಭಿವೃದ್ಧಿ ಕುರಿತು ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜೂನ್-ಜುಲೈನಿಂದಲೇ ದಸರಾ ಕುರಿತು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರ ಕೈಗೊಳ್ಳಲಾಗುವುದು. ಆದರೆ, ದಸರಾ ಕಾರ್ಯಕ್ರಮಗಳ ಬಗ್ಗೆ ಪ್ರವಾಸಿಗರಿಗೆ ಸಮಗ್ರವಾದ ಮಾಹಿತಿ ದೊರೆಯುವುದಿಲ್ಲ. ಒಂದು ರೀತಿಯ ಗೊಂದಲ ಪ್ರವಾಸಿಗರಿಗೆ ಎದುರಾಗುತ್ತದೆ. ಹೋಟೆಲ್‍ನವರೂ ಸಹ ಪ್ರವಾಸಿಗರಿಗೆ ಸರಿಯಾದ ಮಾಹಿತಿ ನೀಡುವುದಿಲ್ಲ ಎಂದು ಹೇಳಿದರು.
ಗೈಡ್‍ಗಳು ಬೇರೆ ಬೇರೆ ರೀತಿಯ ಇತಿಹಾಸ ಹೇಳುತ್ತಾರೆ.

ಪ್ರವಾಸಿಗರೊಂದಿಗೆ ಸೌಜನ್ಯದಿಂದ ವರ್ತಿಸದಿರುವ ಗೈಡ್‍ಗಳು ಇದ್ದಾರೆ. ಅದನ್ನು ಸರಿಪಡಿಸಿಕೊಳ್ಳಬೇಕು. ಅವರಿಗೆ ತರಬೇತಿ ಅಗತ್ಯವಿದ್ದರೆ ಪ್ರಸ್ತಾವನೆ ಕೊಡಿ ಎಂದು ಸಚಿವರು ಹೇಳಿದರು.
ದಸರಾ ಕಾರ್ಯಕ್ರಮಗಳು ಕೊನೆಯ ಹಂತದಲ್ಲಿ ನಿಗದಿಯಾಗುವುದರಿಂದ ಪ್ರವಾಸೋದ್ಯಮ ಉತ್ತೇಜನ ಸಾಧ್ಯವಾಗುತ್ತಿಲ್ಲ. ಜಿಲ್ಲಾ ಮಟ್ಟದಲ್ಲಿ ಪ್ರವಾಸೋದ್ಯಮ ಇಲಾಖೆಯನ್ನು ದಸರಾ ಒಳಗಾಗಿ ಬಲಪಡಿಸಲಾಗುವುದು. ಅಂತಾರಾಷ್ಟ್ರೀಯ ಯೋಗ ದಿನ, ಪ್ರವಾಸಿ ದಿನವನ್ನು ಮೈಸೂರಿನಲ್ಲಿ ಆಯೋಜಿಸಲು ಚಿಂತಿಸಲಾಗಿದೆ ಎಂದರು.

ಸಾಹಸ ಕ್ರೀಡೆಗಳನ್ನು ಪ್ರವಾಸೋದ್ಯಮ ಇಲಾಖೆಯಿಂದ ಆಯೋಜಿಸಲಾಗುತ್ತಿದೆ. ಮೈಸೂರಿನಲ್ಲಿ ‘ಏರೋಸ್ಪೋಟ್ರ್ಸ್’ ಆಯೋಜಿಸಲು ಕ್ರಮವಹಿಸಲಾಗುವುದು. ಪ್ರವಾಸಿಗರಿಗೆ ಸೂಕ್ತ ಮಾಹಿತಿ ಒದಗಿಸಲು ‘ಮೈಸೂರು ಆಪ್’ ಮಾಡಬೇಕೆಂಬ ಬೇಡಿಕೆ ಇದೆ. ಈ ಬಗ್ಗೆ ಕ್ರಮವಹಿಸಲಾಗುವುದು. ಈ ವರ್ಷವನ್ನು ಅರಣ್ಯ ವರ್ಷವಾಗಿ ಆಚರಿಸಲಾಗುತ್ತಿದ್ದು, ಇಲಾಖೆಯ ಅಧೀನದಲ್ಲಿರುವ ಜಂಗಲ್ ಲಾಡ್ಜ್‍ಗಳ ಉತ್ತೇಜನಕ್ಕೆ ಕ್ರಮಕೈಗೊಳ್ಳಲಾಗಿದೆ. ಪ್ರವಾಸಿಗರ ಸಂಖ್ಯೆ ಈ ವರ್ಷ ಶೇ. 26 ರಷ್ಟು ಹೆಚ್ಚಾಗಿದೆ ಎಂದು ಎಂದು ಹೇಳಿದರು.

 

 

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s