ನೀರು ಒದಗಿಸಲು ಸಚಿವ ಕಾಗೋಡು ತಿಮ್ಮಪ್ಪ ಸೂಚನೆ

ಬೇಸಿಗೆಯ ಧಗೆಯಲ್ಲಿ ಬಳಲುತ್ತಿರುವ ಯಾವುದೇ ನಗರ ಅಥವಾ ಗ್ರಾಮಗಳಲ್ಲಿ ನೀರು ಒದಗಿಸಲು ತಕ್ಷಣ ಕ್ರಮ ಕೈಗೊಳ್ಳಿ ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ಧಾರವಾಡದಲ್ಲಿ ಬರ ಪರಿಹಾರ, ಅರಣ್ಯ ಹಕ್ಕು ಸಮಿತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ನೀರಿನ ಸಮಸ್ಯೆ ತಲೆದೋರಿದರೆ ತಕ್ಷಣವೇ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಕೆಗೆ ಕ್ರಮ ಕೈಗೊಳ್ಳಬೇಕು. ಕುಡಿಯುವ ನೀರು ಪೂರೈಕೆಗಾಗಿ 47 ಕೋಟಿ ರೂ.ಗಳನ್ನು ಧಾರವಾಡಕ್ಕೆ ಒದಗಿಸಲಾಗಿದೆ.ಇದರಲ್ಲಿ ಈಗಾಗಲೇ ಶೇ.85 ರಷ್ಟು ಹಣ ಖರ್ಚಾಗಿದೆ ಅಗತ್ಯ ಬಿದ್ದರೆ ಹೆಚ್ಚಿನ ಹಣ ಒದಗಿಸಲಾಗುವದು ಎಂದರು.

ಸರಕಾರಿ ಜಮೀನಿನಲ್ಲಿ ಸಾಗುವಳಿ ಮಾಡುತ್ತಿರುವ ರೈತರು ಕೂಡಲೇ ಕಂದಾಯ ಉಪವಿಭಾಗಾಧಿಕಾರಿಗಳಿಗೆ ನಮೂನೆ 53 ರಲ್ಲಿ ಅರ್ಜಿ ಸಲ್ಲಿಸಿ ತಮ್ಮ ಜಮೀನನ್ನು ಸಕ್ರಮ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಈ ಹಿಂದೆ ಅರ್ಜಿ ತಿರಸ್ಕೃತಗೊಂಡವರು ಕೂಡಲೇ ಅರ್ಜಿ ಸಲ್ಲಿಸಬೇಕು. ಧಾರವಾಡ ಜಿಲ್ಲೆಯಲ್ಲಿ ಸುಮಾರು 13 ಸಾವಿರ ಅರ್ಜಿಗಳು ಬಂದಿದ್ದು ಅವುಗಳಲ್ಲಿ 4 ಸಾವಿರ ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ ಎಂದರು.


ನಿಮ್ಮ ಟಿಪ್ಪಣಿ ಬರೆಯಿರಿ