ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ‘ಮುಖ್ಯಮಂತ್ರಿ ಕೌಶಲ್ಯ ಅಭಿವೃದ್ದಿ ವೆಬ್ ಪೋರ್ಟಲ್ ಗೆ ಚಾಲನೆ

358eee18-7bd2-4d8b-b1e2-a178a0a5e098ಕೊಪ್ಪಳ:
ವಿದ್ಯಾವಂತ ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗ ಕೈಗೊಳ್ಳುವ ನಿಟ್ಟಿನಲ್ಲಿ ರಾಷ್ಟ್ರೀಯ ಕೌಶಲ್ಯಾಭಿವೃದ್ಧಿ ಕೇಂದ್ರವನ್ನು ಕೊಪ್ಪಳಕ್ಕೆ ಮಂಜೂರು ಮಾಡಲಾಗಿದ್ದು, ಇದಕ್ಕಾಗಿ 90 ಕೋಟಿ ರೂ. ಅನುದಾನವನ್ನು ಒದಗಿಸಲಾಗಿದೆ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಮತ್ತು ಉನ್ನತ ಶಿಕ್ಷಣ ಮಂತ್ರಿಗಳಾದ ಬಸವರಾಜ ರಾಯರಡ್ಡಿ ಅವರು ಹೇಳಿದರು.
ಮುಖ್ಯಮಂತ್ರಿಗಳ ಕೌಶಲ್ಯಾಭಿವೃದ್ಧಿ ಕರ್ನಾಟಕ ಕಾರ್ಯಕ್ರಮದಡಿ ಕೌಶಲ್ಯ ತರಬೇತಿ ಆಕಾಂಕ್ಷಿತ ಯುವಜನರ ಬೇಡಿಕೆ ಸಮೀಕ್ಷೆ ಮತ್ತು ನೋಂದಣಿ ಕಾರ್ಯಕ್ರಮ ಕುರಿತು ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‍ನಲ್ಲಿ ವೆಬ್‍ಪೋರ್ಟಲ್ ಉದ್ಘಾಟಿಸಿ ಅವರು ಮಾತನಾಡಿದರು.

ಯುವ ಜನರಿಗೆ ಉದ್ಯೋಗ ಕೌಶಲ್ಯವನ್ನು ನೀಡಿ, ಅವರ ಸಬಲಿಕರಣ ಕೈಗೊಳ್ಳಲು ರಾಜ್ಯದಲ್ಲಿ ಈ ವರ್ಷ 05 ಲಕ್ಷ ಯುವಜನರಿಗೆ ಕೌಶಲ್ಯ ತರಬೇತಿ ನೀಡಲು ಸರ್ಕಾರ ಗುರಿಯನ್ನು ನಿಗದಿಪಡಿಸಿದೆ. ಕೊಪ್ಪಳ ಜಿಲ್ಲೆಯಲ್ಲಿ ಈ ವರ್ಷ 11 ಸಾವಿರ ಯುವಜನರಿಗೆ ಕೌಶಲ್ಯ ತರಬೇತಿ ನೀಡಲಾಗುವುದು. ಇದಕ್ಕಾಗಿ ಮುಖ್ಯಮಂತ್ರಿಗಳ ಕೌಶಲ್ಯಾಭಿವೃದ್ಧಿ ಕರ್ನಾಟಕ ಕಾರ್ಯಕ್ರಮವನ್ನು ಜಾರಿಗೊಳಿಸಲಾಗಿದ್ದು, ಯುವಜನರು ತಮ್ಮ ಹೆಸರನ್ನು ನೋಂದಾಯಿಸಲು ವೆಬ್‍ಪೋರ್ಟಲ್ ಮೇ. 15 ರಿಂದ ಪ್ರಾರಂಭಿಸಲಾಗಿದೆ. ಯುವಜನರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಚಿವ ಬಸವರಾಜ ರಾಯರಡ್ಡಿ ಅವರು ಹೇಳಿದರು.

ಕೌಶಲ್ಯಾಭಿವೃದ್ಧಿ ವಿವಿ ಸ್ಥಾಪನೆ :
ರಾಜ್ಯದಲ್ಲಿ ಪ್ರತಿ ವರ್ಷ ಸುಮಾರು 80 ಸಾವಿರ ವಿದ್ಯಾರ್ಥಿಗಳು ಇಂಜಿನಿಯರಿಂಗ್ ಪದವಿ ಪಡೆಯುತ್ತಿದ್ದಾರೆ. ಶಿಕ್ಷಣ ಪಡೆದ ಎಲ್ಲರಿಗೂ ಸರ್ಕಾರಿ ನೌಕರಿ ದೊರೆಯಲು ಸಾಧ್ಯವಿಲ್ಲ. ಈಗಿನ ಯುವಪೀಳಿಗೆ ಟೇಬಲ್ ವರ್ಕ್‍ಗೆ ಆದ್ಯತೆ ನೀಡುತ್ತಾರೆಯೇ ಹೊರತು, ವೃತ್ತಿ ಕೌಶಲ ಆಧಾರಿತ ಉದ್ಯೋಗಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿಲ್ಲ. ಕುಂಬಾರಿಕೆ, ಕಮ್ಮಾರಿಕೆ, ಕಸೂತಿ ಕಲೆಗಳು, ಶಿಲ್ಪ ಕೆತ್ತನೆ ಹೀಗೆ ವೃತ್ತಿ ಆಧಾರಿತ ಕೌಶಲ್ಯಗಳನ್ನು ಯಾರೂ ಕಲಿಯಲು ಮುಂದಾಗುತ್ತಿಲ್ಲ. ಆದರೆ ವಾಸ್ತವವಾಗಿ ವೃತ್ತಿ ಆಧಾರಿತ ಉದ್ಯೋಗಕ್ಕೆ ಇತ್ತೀಚೆಗೆ ವ್ಯಾಪಕ ಬೇಡಿಕೆ ಇದೆ. 5 ಸಾವಿರಕ್ಕೂ ಹೆಚ್ಚು ಗ್ರಾಮೀಣ ಕೌಶಲ್ಯ ಆಧಾರಿತ ವೃತ್ತಿಗೆ ದೇಶದಲ್ಲಿ ವಿಫುಲ ಅವಕಾಶಗಲಿವೆ. ಯುವಜನರಿಗೆ ಕೌಶಲ್ಯ ಅಭಿವೃದ್ಧಿಗಾಗಿಯೇ 2017-18 ನೇ ಸಾಲಿನಲ್ಲಿ ರಾಜ್ಯದಲ್ಲಿ ಪ್ರತ್ಯೇಕ ವಿಶ್ವವಿದ್ಯಾಲಯವನ್ನು ಖಾಸಗಿಯವರ ಸಹಭಾಗಿತ್ವದಲ್ಲಿ ಸ್ಥಾಪಿಸಲು ಈಗಾಗಲೆ ಟಾಟಾ ಕಂಪನಿಯಂತಹವರ ಸಹಭಾಗಿತ್ವ ಪಡೆಯಲು ಮಾತುಕತೆ ನಡೆಸಲಾಗಿದೆ. ಇದೇ ವರ್ಷ ಕೌಶಲ್ಯಾಭಿವೃದ್ಧಿ ವಿಶ್ವವಿದ್ಯಾಲಯ ಪ್ರಾರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮಂತ್ರಿಗಳು ಹೇಳಿದರು.

d8a393e9-fa0f-451a-8272-fcd7f45b7d91ದಾರವಾಡ:
ವಿದ್ಯಾವಂತ ಯುವಸಮುದಾಯ ಕೇವಲ ಪದವಿ,ಡಿಪ್ಲೋಮಾ,ಐಟಿಐ ಸರ್ಟಿಫಿಕೇಟುಗಳನ್ನು ಪಡೆದರೆ ಸಾಲದು ಉದ್ಯೋಗ ಪಡೆಯಲು ಬೇಕಾದ ಅಗತ್ಯ ವೃತ್ತಿ ಕೌಶಲ್ಯ,ನೈಪುಣ್ಯತೆಗಳನ್ನು ಮೈಗೂಡಿಸಿಕೊಳ್ಳಬೇಕು.ಮಾತೃಭಾಷೆಯ ಜೊತೆಗೆ,ಹಿಂದಿ ಮತ್ತು ಇಂಗ್ಲೀಷಿನಲ್ಲಿಯೂ ಸಹ ವ್ಯವಹರಿಸುವ ಪ್ರತಿಭೆ ಗಳಿಸಿಕೊಳ್ಳಬೇಕು ಎಂದು ಗಣಿ,ಭೂವಿಜ್ಞಾನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ ಹೇಳಿದರು.
ಕನ್ನಡ ಕುಲಪುರೋಹಿತ ಆಲೂರು ವೆಂಕಟರಾವ್ ಸಭಾಭವನದಲ್ಲಿ ಕೌಶಲ್ಯ ಅಭಿವೃದ್ಧಿ,ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ,ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಏರ್ಪಡಿಸಲಾಗಿದ್ದ ನಿರುದ್ಯೋಗಿ ಯುವಜನರ ಬೇಡಿಕೆ ಸಮೀಕ್ಷೆ ಮತ್ತು ನೋಂದಣಿ ಕಾರ್ಯಕ್ರಮದ ವೆಬ್‍ಪೋರ್ಟಲ್ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ca242f04-5d3a-46a4-982e-af3ff551ebde

 

ಹಾಸನ:

 

ಹಾಸನದಲ್ಲಿ ಕೌಶಲ್ಯ ಕರ್ನಾಟಕ ನೊಂದಣಿ‌ ಅಭಿಯಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ರೇಷ್ಮೆ ಮತ್ತು ಪಶುಸಂಗೋಪನೆ ಸಚಿವರಾದ ಎ ಎ.ಮಂಜು ಅವರು ಉದ್ಘಾಟಿಸಿದರು

 

ಶಿವಮೊಗ್ಗ:
fa0b6401-3651-49b8-81de-27ab54939704ನಿರುದ್ಯೋಗಿ ಯುವಜನರ ಬೇಡಿಕೆ ಸಮೀಕ್ಷೆ ಹಾಗೂ ನೋಂದಣಿ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕಾಗೋಡು ತಿಮ್ಮಪ್ಪ ಕೌಶಲ್ಯ ವೆಬ್ ಪೋರ್ಟಲ್ ಉದ್ಘಾಟಿಸಿದರು. ಶಾಸಕರಾದ ಕೆ.ಬಿ.ಪ್ರಸನ್ನಕುಮಾರ್, ಆರ್.ಪ್ರಸನ್ನಕುಮಾರ್, ಎಂ.ಬಿ.ಭಾನುಪ್ರಕಾಶ್, ಜಿಲ್ಲಾಧಿಕಾರಿ ಎಂ.ಲೋಕೇಶ್, ಜಿಪಂ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಡಾ ಕೆ ರಾಕೇಶ್ ಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಮುಲೈ ಮಹಿಲಿನ್ ಇದ್ದರು.

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s