ನಗರದಲ್ಲಿ ಮತ್ತಷ್ಟು ಟೆಂಡರ್ ಶ್ಯೂರ್ ರಸ್ತೆಗಳು ನಿರ್ಮಾಣವಾಗಲಿವೆ:ಮುಖ್ಯಮಂತ್ರಿ ಸಿದ್ದರಾಮಯ್ಯ

18447627_1578601638817187_7894122719039593554_nರಾಷ್ಟ್ರದಲ್ಲಿಯೇ ಮೊದಲ ಬಾರಿಗೆ  ಬೆಂಗಳೂರು  ನಗರದಲ್ಲಿ ಟೆಂಡರ್ ಶ್ಯೂರ್ ರಸ್ತೆಗಳನ್ನು  ಅನುಷ್ಠಾನಕ್ಕೆ ತರಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಬ್ರಿಗೇಡ್ ಮತ್ತು ರೆಸಿಡೆನ್ಸಿ ರಸ್ತೆಗಳ ಜಂಕ್ಷನ್ ಬಳಿ ನಡೆದ ಟೆಂಡರ್ ಶ್ಯೂರ್ ರಸ್ತೆಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಮಾತನಾಡಿದರು.

200ಕೋಟಿ ರೂ ವೆಚ್ಚ:

ಸಾರ್ವಜನಿಕರಿಗೆ ಅನುಕೂಲ ಒದಗಿಸುವ  ಸಲುವಾಗಿ ಟೆಂಡರ್ ಶ್ಯೂರ್ ಯೋಜನೆ ಕೈಗೊಂಡಿದ್ದೇವೆ. ಸಾರ್ವಜನಿಕರ ಸುಲಭ ಓಡಾಟಕ್ಕೆ  ರಸ್ತೆಗಳ ನಿರ್ಮಾಣವಾಗಿದೆ ಎಂದು ನುಡಿದ ಮುಖ್ಯಮಂತ್ರಿಗಳು 200ಕೋಟಿ ರೂಪಾಯಿ ವೆಚ್ಚದಲ್ಲಿ  13ರಸ್ತೆಗಳಿಗೆ   ಟೆಂಡರ್ ಕರೆಯಲಾಗಿದೆ. ಇದೇ ಯೋಜನೆಯಡಿ ಇನ್ನೂ 25ರಸ್ತೆಗಳನ್ನು ನಿರ್ಮಿಸಲಾಗುವುದು ಎಂದರು. ಬೆಂಗಳೂರು ನಗರದಲ್ಲಿ 50ರಸ್ತೆಗಳ ನಿರ್ಮಾಣಕ್ಕೆ ಇದುವರೆಗೆ 700ಕೋಟಿ ರೂಪಾಯಿಗಳನ್ನು ಖರ್ಚು ಮಾಡಲಾಗಿದೆ ಎಂದು ಹೇಳಿದರು.

ನಗರದಲ್ಲಿ  ವಿವಿಧ ಅಭಿವೃದ್ಧಿ ಕಾರ್ಯಕ್ಕೆ ಒಟ್ಟು 7 ಸಾವಿರ 300.ಕೋಟಿ ರೂಪಾಯಿಗಳನ್ನು  ಬಿಡುಗಡೆ ಮಾಡಲಾಗಿದೆ, 18447482_1578603475483670_4988647485436310097_n3000 ಸಾವಿರ ಹೊಸ ಬಸ್ ಗಳನ್ನು ನಗರದಲ್ಲಿ ತರುತ್ತಿದ್ದೇವೆ, 46 ಕಿ.ಮಿ.ಮೆಟ್ರೋ ಪೂರ್ಣ ಗೊಂಡಿದೆ ಎಂದು ನುಡಿದ ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ಉದ್ಘಾಟನೆಗೊಂಡ ವಾರ್ ಮೆಮೋರಿಯಲ್ ಬಗ್ಗೆ ಮಾತನಾಡಿ ರೈತರು ಮತ್ತು ಯೋಧರನ್ನು ನಾವು ಪ್ರತಿ ದಿನ ನೆನೆಯಬೇಕು ಎಂದು ಹೇಳಿದರು.

ಇದಕ್ಕೂ ಮುನ್ನ ಅವರು ಬ್ರಿಗೆಡ್ ರಸ್ತೆ ಮತ್ತು ರೆಸಿಡೆನ್ಸಿ ರಸ್ತೆಗಳ ಜಂಕ್ಷನ್ ಬಳಿಯಲ್ಲಿ ಟೆಂಡರ್ ಶ್ಯೂರ್ ರಸ್ತೆಗಳನ್ನು ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಿದರು.

ಮುಖ್ಯಮಂತ್ರಿಗಳ ಜೊತೆ ಸಚಿವರುಗಳಾದ ಕೆ ಜೆ ಜಾರ್ಜ್, ರಾಮಲಿಂಗಾರೆಡ್ಡಿ ಮತ್ತು ಗಣ್ಯರು ಹಾಜರಿದ್ದರು. ಬೆಂಗಳೂರು ಮಹಾ ನಗರ ಪಾಲಿಕೆ ಮುಖ್ಯಮಂತ್ರಿಗಳ ನಗರೋತ್ಥಾನ ಯೋಜನೆ ಅನುದಾನದಲ್ಲಿ ಟೆಂಡರ್ ಶ್ಯೂರ್ ರಸ್ತೆಗಳನ್ನು ನಿರ್ಮಾಣ ಮಾಡಿದೆ.

ಸನ್ಮಾನ:

18486350_1578620758815275_2456000434272213629_nಟೆಂಡರ್ ಶ್ಯೂರ್ ರಸ್ತೆಗಳನ್ನು  ಲೋಕಾರ್ಪಣೆ ಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಈ ಸಂದರ್ಭ ಸನ್ಮಾನಿಸಲಾಯಿತು.

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s