‘ನಮ್ಮ ಹೊಲ ನಮ್ಮ ದಾರಿ’ಗೆ ದಾರವಾಡ ಮಾದರಿ

ಸರ್ಕಾರ ನಾಲ್ಕು ವರ್ಷಗಳನ್ನು ಪೂರೈಸಿ ಐದನೇ ವರ್ಷಕ್ಕೆ ಯಶಸ್ವಿಯಾಗಿ ಮುನ್ನಡೆಯುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಗಣಿ ಮತ್ತು ಭೂವಿಜ್ಞಾನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ ಹೇಳಿದರು.

ನಗರದ ಡಾ. ಮಲ್ಲಿಕಾರ್ಜುನ ಮನಸೂರ ಕಲಾಭವನದಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್,ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ‘ಜನಮನ’ ಕಾರ್ಯಕ್ರಮ ಉದ್ಘಾಟಿಸಿ ಸಚಿವರು ಮಾತನಾಡಿದರು.

ನುಡಿದಂತೆ ನಡೆಯುತ್ತಿರುವ ರಾಜ್ಯ ಸರ್ಕಾರವು ಆಡಳಿತದ ಚುಕ್ಕಾಣಿ ಹಿಡಿಯುವ ಸಂದರ್ಭದಲ್ಲಿ ಹೇಳಿದಂತೆ, ಪ್ರಣಾಳಿಕೆಯಲ್ಲಿ ಘೋಷಿಸಿದ್ದ 160 ಭರವಸೆಗಳಲ್ಲಿ 150ಕ್ಕೂ ಹೆಚ್ಚು ಕೆಲಸ ಮಾಡುವಲ್ಲಿ ಯಶಸ್ವಿಯಾಗಿದೆ. ಜನಪರ ಆಲೋಚನೆ ಮತ್ತು ಜನರ ಭಾವನೆಗಳನ್ನು ಅರಿತುಕೊಂಡು ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಯಶಸ್ವಿ ಯೋಜನೆಗಳು:
ಅನ್ನಭಾಗ್ಯ,ಕ್ಷೀರಭಾಗ್ಯ,ಕೃಷಿಭಾಗ್ಯ,ಕ್ಷೀರಧಾರೆ,ವಸತಿಭಾಗ್ಯ,ವಿದ್ಯಾಸಿರಿ,ಪಶುಭಾಗ್ಯ,ಆರೋಗ್ಯಭಾಗ್ಯ ಮೊದಲಾದ ಯೋಜನೆಗಳನ್ನು ಜನರಿಗೆ ಮುಟ್ಟಿಸುವಲ್ಲಿ ರಾಜ್ಯ ಸರ್ಕಾರದ ಸಾಧನೆ ಅಭೂತಪೂರ್ವವಾಗಿದೆ . ಒಂದು ಸರ್ಕಾರದ ಯಶಸ್ವಿಯಾಗಿ ಮುನ್ನಡೆಯುತ್ತಿದೆ ಎಂದರೆ ಅಲ್ಲಿ ಜನರ ಸಹಕಾರವು ಬಹು ಮುಖ್ಯವಾಗಿದೆ ನಮ್ಮ ಸರ್ಕಾರಕ್ಕೆ ಜನಬೆಂಬಲವು ಇರುವುದರಿಂದ ಜಾರಿಗೆ ತಂದ ಎಲ್ಲಾ ಯೋಜನೆಗಳು ಫಲಾನುಭವಿಗಳಿಗೆ ಮುಟ್ಟುವಂತಾಗಿದೆ. ಪ್ರಸ್ತುತ ಸಂದರ್ಭದಲ್ಲಿ ರಾಜ್ಯದಲ್ಲಿ ಬರದ ಛಾಯೆ ತಾಂಡವವಾಡುತ್ತಿದ್ದರೂ ಸಹ ಅನ್ನಭಾಗ್ಯ ಯೋಜನೆಯು ಜನರ ಹಸಿವನ್ನು ನೀಗಿಸುವಲ್ಲಿ ಬಹುಮುಖ್ಯ ಪಾತ್ರವಹಿಸುತ್ತಿದೆ ಎಂದರು.

ಮಾದರಿ ಜಿಲ್ಲೆ:
ಉದ್ಯೋಗ ಅರಸಿ ಜನ ಗುಳೆ ಹೋಗುವದು ಅನ್ನಭಾಗ್ಯ ಯೋಜನೆಯಿಂದಾಗಿ ನಿಯಂತ್ರಣಕ್ಕೆ ಬಂದಿದೆ. ರಾಜ್ಯ ಸರ್ಕಾರ ಉಚಿತ ಅಕ್ಕಿ ವಿತರಿಸುವ ಮೂಲಕ ಜನರ ಮನಮುಟ್ಟಿದೆ ಎಂದ ಅವರು, ನಮ್ಮ ಹೊಲ ನಮ್ಮ ದಾರಿ ಯೋಜನೆಯಲ್ಲಿ ಕರ್ನಾಟಕದಲ್ಲಿಯೇ ಧಾರವಾಡ ಜಿಲ್ಲೆ ಮಾದರಿಯಾಗಿದೆ. ಸುಮಾರು 570 ರಿಂದ 80 ಕಿ.ಮೀ ಹೊಲಗಳ ರಸ್ತೆ ನಿರ್ಮಾಣ ಕಾರ್ಯ ಮುಗಿದಿದೆ. ಕ್ಷೀರಧಾರೆ ಯೋಜನೆಯ ಮೂಲಕ ಪ್ರತಿ ಲಿ.ಹಾಲಿಗೆ 5 ರೂ. ಪ್ರೋತ್ಸಾಹ ಧನ ನೀಡುತ್ತಿರುವ ಸರ್ಕಾರ ಪ್ರತಿದಿನ 4 ಕೋಟಿ ರೂ. ಹಣ ರೈತರ ಕೈ ಸೇರುವಂತೆ ಮಾಡುತ್ತಿದೆ ಎಂದರು.

ನಾಲ್ಕು ವರ್ಷ ಪೂರೈಕೆ:
ಕೃಷಿಭಾಗ್ಯ ಯೋಜನೆಯ ಮೂಲಕ ಅನೇಕ ರೈತಬಾಂಧವರು ತಮ್ಮ ಹೊಲಗಳಲ್ಲಿ ಕೃಷಿ ಹೊಂಡಗಳ ನಿರ್ಮಾಣ ಮಾಡಿಕೊಳ್ಳುವ ಮೂಲಕ ನೆಮ್ಮದಿಯ ಜೀವನ ನಡೆಸುವಂತಾಗಿದೆ. ಪಶುಭಾಗ್ಯ ಯೋಜನೆಯಿಂದ ಜನರು ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ. ಯಾರೊಬ್ಬರು ಉನ್ನತ ಶಿಕ್ಷಣದಿಂದ ವಂಚಿತರಾಗಬಾರದೆಂದು ವಿದ್ಯಾಸಿರಿ, ಮಹಿಳೆಯರಿಗಾಗಿ ಮನಸ್ವಿನಿ, ಲೈಂಗಿಕ ಅಲ್ಪಸಂಖ್ಯಾತರಿಗೆ ಮೈತ್ರಿ, ಎಲ್ಲ ಜಾತಿ ವರ್ಗಗಳ ಬಡವರಿಗೆ ಋಣಮುಕ್ತ ಸೇರಿದಂತೆ ಅನೇಕ ಮಹತ್ತರವಾದ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ನಾಲ್ಕು ವರ್ಷ ಪೂರೈಸಿದೆ ಎಂದು ಸಚಿವರು ತಿಳಿಸಿದರು.
ಕಿರು ಪುಸ್ತಕ ಬಿಡುಗಡೆ:
ಇದೇ ಸಂದರ್ಭದಲ್ಲಿ 50 ನಗರ ಸಾರಿಗೆ ವಾಹನಗಳನ್ನು ಸಚಿವರು ಲೋಕಾರ್ಪಣೆ ಮಾಡಿದರು. ಕಳೆದ 4 ವರ್ಷಗಳಲ್ಲಿ ಜಿಲ್ಲೆಯಲ್ಲಿ ಆಗಿರುವ ಪ್ರಗತಿ ಮಾಹಿತಿ ಕುರಿತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹೊರತಂದಿರುವ ಕಿರುಪುಸ್ತಕವನ್ನು ಬಿಡುಗಡೆ ಮಾಡಲಾಯಿತು.

ಉಚಿತ ಅಕ್ಕಿ:

ಸರ್ಕಾರ ವಿವಿಧ ಯೋಜನೆಗಳ ಸುಮಾರು 50 ಫಲಾನುಭವಿಗಳು ಯೋಜನೆಗಳ ಕುರಿತು ತಮ್ಮ ಅನಿಸಿಕೆಗಳನ್ನು ಸಮಾರಂಭದಲ್ಲಿ ವ್ಯಕ್ತಪಡಿಸಿದರು. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ,ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ,ಕೃಷಿ ಇಲಾಖೆ,ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ ಮತ್ತಿತರ ಇಲಾಖೆಗಳ ಫಲಾನುಭವಿಗಳಿಗೆ ಸಹಾಯಧನದ ಚೆಕ್‍ಗಳನ್ನು ವಿತರಿಸಲಾಯಿತು. ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಉಚಿತ ಅಕ್ಕಿ ಹಂಚಲಾಯಿತು.

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s