ಪರಿಸರ ಉಳಿವಿಗೆ ಕೈ ಜೋಡಿಸಿ…

ಸಾಂಸ್ಕೃತಿಕ ನಗರಿಯ ಜೊತೆ ಮೈಸೂರು ಜಿಲ್ಲೆಯು ಸ್ವಚ್ಚ ನಗರ ಎಂದು ಕರೆಸಿಕೊಂಡಿದೆ. ಸ್ವಚ್ಚತೆಯಲ್ಲಿ 10ನೇ ಸ್ಥಾನದಲ್ಲಿರುವ ಮೈಸೂರು ನಗರವು ಸ್ವಚ್ಚತೆಗೆ ಹೆಚ್ಚಿನ ಒತ್ತು ನೀಡುತಿದ್ದು ಮೈಸೂರು ಮ.ನ.ಪಾಲಿಕೆಯು ಸ್ವಚ್ಚತಾ ಕಾರ್ಯಕ್ರಮಗಳನ್ನು ಕೂಡ ಆಯೋಜಿಸುತ್ತಿದೆ. ಪರಿಸರ ಸ್ನೇಹಿ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ ವಿಷಕಾರಿ ರಾಸಾಯನಿಕ ವಸ್ತುಗಳನ್ನು ಬಳಸದಂತೆ ಆದೇಶವನ್ನು ಸಹ  ಹೊರಡಿಸಿದೆ. ಈ ಕುರಿತು ಹೆಚ್ಚಿನ ವಿವರ ಇಲ್ಲಿದೆ.

ಪರಿಸರ ಸ್ನೇಹಿ ಗೌರಿ ಗಣೇಶ ಹಬ್ಬ ಆಚರಣೆ ಸಂಬಂಧ  ಪ್ಲಾಸ್ಟರ್ ಆಫ್ ಪ್ಯಾರೀಸ್ ಹಾಗೂ ವಿಷಕಾರಿ ರಸಾಯನಿಕ ಬಣ್ಣ ಬಳಸಿ ತಯಾರಿಸಿರುವ ಗಣೇಶ ಮೂರ್ತಿಗಳನ್ನು  ಬಳಸದಂತೆ ಮೈಸೂರು ಮಹಾನಗರ ಪಾಲಿಕೆ ಆಯುಕ್ತರಾದ ಜಿ. ಜಗದೀಶ್ ಅವರು ಮನವಿ ಮಾಡಿದ್ದಾರೆ.

ವಿಷಕಾರಿ ರಾಸಾಯನಿಕ, ಲೋಹ ಲೇಪದ, ಪ್ಲಾಸ್ಟರ್ ಆಫ್ ಪ್ಯಾರೀಸ್‍ನ ಗಣೇಶನ ಮೂರ್ತಿ ಬಳಕೆ ಮಾಡಬೇಡಿ. ಸಾದಾ ಜೇಡಿ ಮಣ್ಣಿನ ಮುದ್ದಾದ ಪುಟ್ಟ ಗಣೇಶ ವಿಗ್ರಹವನ್ನು ಸ್ಥಾಪಿಸಿ, ಎಲೆ, ಹೂವುಗಳಿಂದ ಮಾಡಿದ ನೈಸರ್ಗಿಕ ಬಣ್ಣ ಹಚ್ಚಿದ ಗಣಪನನ್ನೇ ಪೂಜಿಸಿ ಎಂದು ಅವರು ಮನವಿ ಮಾಡಿದ್ದಾರೆ.

ಪ್ಲಾಸ್ಟಿಕ್  ಬೇಡ:

ಸಾಮೂಹಿಕವಾಗಿ ನಡೆಸುವ ಗಣೇಶನ ಚಪ್ಪರಕ್ಕೆ ಪರಿಸರ ಸ್ನೇಹಿ ವಸ್ತುಗಳನ್ನೇ ಬಳಸಿ, ಎಲ್ಲೂ ಪ್ಲಾಸ್ಟಿಕ್ ವಸ್ತುಗಳ ಬಳಕೆ ಮಾಡಬೇಡಿ, ಬಾವಿ, ಕೆರೆ, ಹೊಳೆಗಳಲ್ಲಿ ಗಣಪತಿ ವಿಸರ್ಜನೆ ಮಾಡಬೇಡಿ. ಹಾಗೆ ಮಾಡಿದರೆ ಅಂತರ್ಜಲ, ಕುಡಿಯುವ ನೀರಿನ ಸೆಲೆ-ಎಲ್ಲವೂ ಮಲಿನಗೊಳ್ಳುತ್ತವೆ. ಬದಲಿಗೆ ಬಕೆಟ್‍ನಲ್ಲಿ, ಸಂಚಾರಿ ವಿಸರ್ಜನಾ ವಾಹನದಲ್ಲಿ ವಿಸರ್ಜಿಸಿ, ಸೂಚಿತ ಕೆರೆಗಳಲ್ಲಿ ವಿಸರ್ಜಿಸುವ ಮುನ್ನ ಹೂವು, ವಸ್ತ್ರ, ಪ್ಲಾಸ್ಟಿಕ್ ಹಾರ ಎಲ್ಲವನ್ನೂ ತೆಗೆಯಿರಿ, ಗಣಪತಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಸಿಡಿಸಬೇಡಿ. ಪಟಾಕಿಯ ಹೊಗೆ ವಿಷಪೂರಿತ; ಅಲ್ಲದೆ ರಸ್ತೆ ತುಂಬಾ ಕಸವಾಗುತ್ತದೆ. ಗಣೇಶ ಹಬ್ಬದಲ್ಲಿ ರಸ್ತೆ, ಚರಂಡಿಯಲ್ಲಿ ಹೂವಿನ ಹಾರ, ತಟ್ಟೆ, ಲೋಟ, ಎಲೆ ಎಸೆಯಬೇಡಿ. ಕಸದ ವಾಹನ ಬಳಸುವಂತೆ ಅವರು ತಿಳಿಸಿದ್ದಾರೆ.

ಕ್ರಿಮಿನಲ್ ಮೊಕದಮ್ಮೆ:

ಗಣೇಶ ಮತ್ತು ಗೌರಿ ಮೂರ್ತಿಗಳನ್ನು ಸಿದ್ದಪಡಿಸುವವರು / ತಯಾರಿಸುವವರು / ಮಾರಾಟ ಮಾಡುವವರು ವಿಷಪೂರಿತ, ರಾಸಾಯನಿಕವುಳ್ಳ ಬಣ್ಣ ಮತ್ತು ಪ್ಲಾಸ್ಟರ್ ಆಫ್ ಪ್ಯಾರೀಸ್ ಅನ್ನು ಮೂರ್ತಿಗಳ ತಯಾರಿಕೆಗೆ ಉಪಯೋಗಿಸಬಾರದು. ಒಂದು ವೇಳೆ ಈ ರೀತಿಯ ಮೂರ್ತಿಗಳನ್ನು ತಯಾರಿಸುವುದಾಗಲೀ / ಮಾರಾಟ ಮಾಡುವುದಾಗಲೀ / ಉಪಯೋಗಿಸುವುದಾಗಲೀ ಕಂಡು ಬಂದರೆ ಅಂತಹ ಮೂರ್ತಿಗಳನ್ನು ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಜಪ್ತಿ ಮಾಡಿ ದಂಡ ವಿಧಿಸಲಾಗುವುದು ಹಾಗೂ ಸಂಬಂಧಪಟ್ಟವರ ವಿರುದ್ದ ಕ್ರಿಮಿನಲ್ ಮೊಕದಮ್ಮೆ ಹೂಡಿ ಕಾನೂನು ರೀತಿಯ ಕ್ರಮ ಜರುಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಸ್ವಚ್ಚ ನಗರ:

ನಗರದಲ್ಲಿ ಪ್ಲಾಸ್ಟರ್ ಆಫ್ ಪ್ಯಾರೀಸ್‍ನಲ್ಲಿ ತಯಾರಿಸಿದ ಗೌರಿ, ಗಣೇಶ ಮೂರ್ತಿಗಳನ್ನು ಮಾರಾಟ ಮಾಡುವುದನ್ನು ತಡೆಗಟ್ಟುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿರುತ್ತದೆ. ಇದರೊಂದಿಗೆ ನಗರವನ್ನು ಪರಿಸರ ಪ್ರೇಮಿನಗರ, ಸ್ವಚ್ಛನಗರ ಎಂಬ ಗರಿಮೆಯನ್ನು ಕಾಪಾಡಬೇಕಾಗಿರುತ್ತದೆ ಅವರು ಮನವಿ ಮಾಡಿದ್ದಾರೆ.

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s