ಹಸಿವು ಮುಕ್ತ ಕರ್ನಾಟಕದ ಹಾದಿಯಲ್ಲಿ

ಬಡ ಕುಟುಂಬಗಳಿಗೆ ಉಚಿತ ಅಕ್ಕಿ, ಧಾನ್ಯ ನೀಡುವ ‘ಅನ್ನಭಾಗ್ಯ’ ಯೋಜನೆಯನ್ನು ನಮ್ಮ ಸರ್ಕಾರ ಜಾರಿಗೊಳಿಸಿರುವುದರಿಂದ, ಹಸಿವುಮುಕ್ತ ಕರ್ನಾಟಕ ನಿರ್ಮಾಣ ಸಾಧ್ಯವಾಗಿದೆ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಮತ್ತು ಉನ್ನತ ಶಿಕ್ಷಣ ಸಚಿವರು ಬಸವರಾಜ ರಾಯರಡ್ಡಿ ಅವರು ಹೇಳಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತಿ ಇವರ ಸಹಯೋಗದಲ್ಲಿ ಜಿಲ್ಲಾ ಆಡಳಿತ ಭವನದ ಆಡಿಟೋರಿಯಂ ಹಾಲ್‍ನಲ್ಲಿ ಶನಿವಾರದಂದು ವಿವಿಧ ಯೋಜನೆಗಳ ಫಲಾನುಭವಿಗಳ ಅಭಿಪ್ರಾಯ ಪಡೆಯುವ ಸಲುವಾಗಿ ಏರ್ಪಡಿಸಲಾಗಿದ್ದ ಜನ-ಮನ ಕಾರ್ಯಕ್ರಮದ ಉದ್ಘಾಟನೆ ಹಾಗೂ ಅನ್ನಭಾಗ್ಯ ಯೋಜನೆ ವಿಸ್ತರಣೆಯಡಿ ಫಲಾನುಭವಿಗಳಿಗೆ ಅಕ್ಕಿ ವಿತರಣೆ ನೆರವೇರಿಸಿ, ಅವರು ಮಾತನಾಡಿದರು.

ಅನ್ನಭಾಗ್ಯ:

ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಅಧಿಕಾರ ಸ್ವೀಕರಿಸಿದ ಕೂಡಲೆ, ಬಡ ಜನರಿಗೆ ಪಡಿತರ ವ್ಯವಸ್ಥೆಯಲ್ಲಿ ಅಕ್ಕಿ,ಧಾನ್ಯ ನೀಡುವ ಅನ್ನಭಾಗ್ಯ ಯೋಜನೆಯನ್ನು ಜಾರಿಗೊಳಿಸಿದರು.  ಇದು ಹಸಿವು ಮುಕ್ತ ಕರ್ನಾಟಕ ನಿರ್ಮಾಣಕ್ಕೆ ನಮ್ಮ ಸರ್ಕಾರ ಇಟ್ಟ ದಿಟ್ಟ ಹೆಜ್ಜೆ.  ಅನ್ನಭಾಗ್ಯ ಯೋಜನೆಯಡಿ ಪ್ರತಿ ಸದಸ್ಯರಿಗೆ 05 ಕೆ.ಜಿ. ಉಚಿತವಾಗಿ ಅಕ್ಕಿ ನೀಡುವ ಯೋಜನೆಯನ್ನು ಜಾರಿಗೊಳಿಸಲಾಯಿತು.  ಇದೀಗ ಪ್ರತಿ ಸದಸ್ಯರಿಗೆ ತಿಂಗಳಿಗೆ 07 ಕೆ.ಜಿ. ಅಕ್ಕಿಯನ್ನು ಉಚಿತವಾಗಿ ನೀಡುತ್ತಿದೆ.

ದಾಸೋಹ ಯೋಜನೆ ಜಾರಿ:

ತೀವ್ರ ಬರ ಪರಿಸ್ಥಿತಿಯ ಹೊರತಾಗಿಯೂ ನಮ್ಮ ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆಯಿಂದಾಗಿ, ಯಾವ ಕುಟುಂಬಗಳೂ ಹಸಿವಿನ ತೊಂದರೆ ಅನುಭವಿಸಲಿಲ್ಲ.  ಕೊಪ್ಪಳ ಜಿಲ್ಲೆಯಲ್ಲಿ 238047 ಬಿಪಿಎಲ್ ಹಾಗೂ 37398 ಅಂತ್ಯೋದಯ ಪಡಿತರ ಚೀಟಿಗಳಿದ್ದು, ಸುಮಾರು 973735 ಫಲಾನುಭವಿಗಳು ಅನ್ನಭಾಗ್ಯ ಯೋಜನೆಯ ಸೌಲಭ್ಯ ಪಡೆಯುತ್ತಿದ್ದಾರೆ.  ಕಳೆದ ನಾಲ್ಕು ವರ್ಷಗಳಲ್ಲಿ ಇದಕ್ಕಗಿಯೇ ಜಿಲ್ಲೆಯಲ್ಲಿ 179. 41 ಕೋಟಿ ರೂ. ಸಹಾಯಧನವನ್ನು ಸರ್ಕಾರ ಭರಿಸಿದೆ.  ಈ ವರ್ಷ ರಾಜ್ಯದಲ್ಲಿ ವೃದ್ಧಾಶ್ರಮ ಮತ್ತು ಅನಾಥಾಶ್ರಮಗಳಿಗೂ ಸಹ ಉಚಿತವಾಗಿ ಆಹಾರಧಾನ್ಯ ಕೊಡುವ ‘ದಾಸೋಹ’ ಯೋಜನೆಯನ್ನು ಸರ್ಕಾರ ಶೀಘ್ರದಲ್ಲಿಯೇ ಜಾರಿಗೆ ತರಲಿದೆ ಎಂದು ಸಚಿವರು ಹೇಳಿದರು.

 ಕೃಷಿ ಭಾಗ್ಯ:

ರಾಜಸ್ಥಾನ ರಾಜ್ಯ ಬಿಟ್ಟರೆ, ಅತಿ ಹೆಚ್ಚು ಒಣ ಬೇಸಾಯವನ್ನು ಹೊಂದಿರುವ ರಾಜ್ಯ ಕರ್ನಾಟಕವಾಗಿದ್ದು, ಮಳೆ ನೀರು ಸಂಗ್ರಹಿಸಿ, ಬೆಳೆಗಳನ್ನು ಉಳಿಸಿಕೊಳ್ಳಬಹುದಾದ ರೀತಿಯಲ್ಲಿ ನಮ್ಮ ಸರ್ಕಾರ ‘ಕೃಷಿ ಭಾಗ್ಯ’ ಯೋಜನೆಯಡಿ ಕೃಷಿ ಹೊಂಡಗಳನ್ನು ನಿರ್ಮಿಸಲು ಸಹಾಯಧನ ನೀಡುತ್ತಿದೆ.  ರಾಜ್ಯದಲ್ಲಿಯೇ ಕೊಪ್ಪಳ ಜಿಲ್ಲೆಯಲ್ಲಿ ಅತಿ ಹೆಚ್ಚು ಕೃಷಿ ಹೊಂಡಗಳ ನಿರ್ಮಾಣವಾಗಿದೆ.  ಜಿಲ್ಲೆಯಲ್ಲಿ 5734 ಕೃಷಿ ಹೊಂಡಗಳನ್ನು ನಿರ್ಮಿಸಲಾಗಿದ್ದು, 5177. 59 ಲಕ್ಷ ರೂ. ಅನುದಾನ ಸರ್ಕಾರ ಒದಗಿಸಿದೆ.  ಪ್ರಸಕ್ತ ವರ್ಷದಲ್ಲಿ ಜಿಲ್ಲೆಯಲ್ಲಿ 4000 ಕೃಷಿ ಹೊಂಡಗಳ ನಿರ್ಮಾಣದ ಗುರಿ ಹೊಂದಲಾಗಿದೆ ಎಂದರು.

ಉಚಿತ ಲ್ಯಾಪ್‍ಟಾಪ್:

1. 5 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‍ಟಾಪ್  ರಾಜ್ಯದಲ್ಲಿ ಉನ್ನತ ವ್ಯಾಸಂಗಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಬಡ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‍ಟಾಪ್ ವಿತರಿಸುವ ಯೋಜನೆಯನ್ನು ಸರ್ಕಾರ ಶೀಘ್ರ ಜಾರಿಗೆ ತರಲಿದ್ದು, ಈ ವರ್ಷ 1.5 ಲಕ್ಷ ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್‍ಟಾಪ್ ವಿತರಿಸುವ ಗುರಿ ಹೊಂದಲಾಗಿದೆ ಎಂದರು.

ಅನ್ನಭಾಗ್ಯ ಯೋಜನೆಯಡಿ ಪ್ರತಿ ಸದಸ್ಯರಿಗೆ 07 ಕೆ.ಜಿ. ಅಕ್ಕಿ ನೀಡುವ ಕಾರ್ಯಕ್ರಮವನ್ನು, ಫಲಾನುಭವಿಗಳಿಗೆ ಅಕ್ಕಿ ವಿತರಿಸುವ ಮೂಲಕ ಸಾಂಕೇತಿಕವಾಗಿ ಇದೇ ಸಂದರ್ಭದಲ್ಲಿ ಚಾಲನೆ ನೀಡಲಾಯಿತು.

 

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s