ಅಂಬೇಡ್ಕರ್ ಅರಿಯುವ ವಿಚಾರ ಸಂಕಿರಣಕ್ಕೆ ಬನ್ನಿ

ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ಅವರ ಕೊಡುಗೆಯನ್ನು ಸ್ಮರಿಸಿಕೊಳ್ಳುವ ನಿಟ್ಟಿನಲ್ಲಿ ಹಾಗೂ ಜನ ಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಕಾರ್ಯಕ್ರಮಗಳನ್ನು ರೂಪಿಸಿದೆ. ಭಾರತ ಭಾಗ್ಯ ವಿಧಾತ ಧ್ವನಿ ಬೆಳಕು ಕಾರ್ಯಕ್ರಮವೂ ಒಂದು. ರಾಜ್ಯಾಧ್ಯಂತ ಪ್ರದರ್ಶನ ಕಂಡ ಈ ಧ್ವನಿ ಬೆಳಕು ಕಾರ್ಯಕ್ರಮ ಭಾರೀ ಪ್ರಶಂಸೆಗೆ ಪಾತ್ರವಾಯಿತು.ಅಂಬೇಡ್ಕರ್ ಅವರ 125ನೇ ಜನ್ಮ ಶತಮಾನೋತ್ಸವದ ಹೊತ್ತಿನಲ್ಲಿ ಡಾ ಬಿ ಆರ್ ಅಂಬೇಡ್ಕರ್ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣವನ್ನು ಏರ್ಪಡಿಸಿದೆ. ದೇಶ ವಿದೇಶಗಳ ಪ್ರತಿನಿಧಿಗಳು ಪಾಲ್ಗೊಳ್ಳುವ ಈ ವಿಚಾರ ಸಂಕಿರಣದ ಕುರಿತು ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಹೆಚ್ ಆಂಜನೇಯ ಅವರು ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ಅಂದ ಹಾಗೆ ಮೇ. 23 ರಂದು ಈ ಸಮ್ಮೇಳನ ಜರುಗುತ್ತಿದೆ. ಸಚಿವರ ಪತ್ರಿಕಾಗೋಷ್ಠಿ ಮಾಹಿತಿ ಇಲ್ಲಿದೆ.

ದೇಶಕ್ಕೆ ಅಂಬೇಡ್ಕರ್ ಅವರು ನೀಡಿರುವ ಕೊಡುಗೆಯನ್ನು ಅರ್ಥಪೂರ್ಣವಾಗಿ ಆಯೋಜಿಸಲು ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದೆ ಎಂದು ಸಮಾಜ ಕಲ್ಯಾಣ ಸಚಿವ ಹೆಚ್. ಆಂಜನೇಯ ಅವರು ತಿಳಿಸಿದರು.

ಸಾಮಾಜಿಕ ನ್ಯಾಯ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಕುರಿತ ರಾಜ್ಯ ಮಟ್ಟದ ವಿಚಾರ ಸಂಕಿರಣವನ್ನು ಮೇ 23 ರಂದು ಬೆಂಗಳೂರಿನ ಡಾ.ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದು, ನೋಬಲ್ ಶಾಂತಿ ಪುರಸ್ಕೃತ ಧರ್ಮಗುರು ದಲೈಲಾಮ ಅವರು ಪ್ರಧಾನ ಭಾಷಣ ಮಾಡಲಿದ್ದಾರೆ ಎಂದು ಸಚಿವರು ಹೇಳಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಸಿದ ಸುದ್ಧಿಗೋಷ್ಟಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ವಿಚಾರ ಸಂಕಿರಣ:

ಈ ವಿಚಾರ ಸಂಕಿರಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಫಾಟಿಸಲಿದ್ದಾರೆ.  ಅದೇ ರೀತಿ ದೇಶದಲ್ಲೇ ಮೊದಲ ಬಾರಿಗೆ ಅಂತರರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣವನ್ನು ಜುಲೈ 21 ರಿಂದ 23 ರವರೆಗೆ ಬೆಂಗಳೂರಿನಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ ಎಂದ ಸಚಿವರು ಈ ವಿಚಾರ ಸಂಕಿರಣಕ್ಕೆ 58 ದೇಶಗಳ ಪ್ರತಿನಿಧಿಗಳು ಭಾಗವಹಿಸಲು ಸಮ್ಮತಿ ನೀಡಲಾಗಿದೆ ಎಂದರು.

ದೇಶಕ್ಕೆ ಅಂಬೇಡ್ಕರ್ ಅವರು ನೀಡಿರುವ ಕೊಡುಗೆಯನ್ನು ಅರ್ಥಪೂರ್ಣವಾಗಿ ಆಯೋಜಿಸಲು ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದೆ. ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಇಲಾಖೆಗಳ ವ್ಯಾಪ್ತಿಯಲ್ಲಿ ಖಾಲಿ ಇರುವ 23,308 ಖಾಲಿ ಹುದ್ದೆಗಳನ್ನು ಭರ್ತಿಮಾಡಲು ಸರ್ಕಾರ ನಿರ್ಧರಿಸಿದೆ.  ಈ ಸಂಬಂಧ ರಾಜ್ಯ ಲೋಕಸೇವಾ ಆಯೋಗಕ್ಕೆ ಹುದ್ದೆಗಳನ್ನು ಭರ್ತಿಮಾಡುವಂತೆ ಪ್ರಸ್ತಾವನೆ ಕಳುಹಿಸಲಾಗಿದೆ ಎಂದರು.

ಹುದ್ದೆ ನೇಮಕಾತಿ:

ಹೊಸದಾಗಿ ಆರಂಭಿಸಲಿರುವ 770 ವಸತಿ ಶಾಲೆಗಳಿಗೆ ಅಡಿಗೆಯವರು ಸೇರಿದಂತೆ ವಿವಿಧ ಡಿ ದರ್ಜೆಯ ನೌಕರರನ್ನು ಆಯಾ ಜಿಲ್ಲಾಧಿಕಾರಿಗಳ ಮೂಲಕ ಪಾರದರ್ಶಕ ಹಾಗೂ ಮೆರಿಟ್ ಆಧಾರದಲ್ಲಿ ಭರ್ತಿಮಾಡಲು ಸೂಚನೆ ನೀಡಲಾಗಿದೆ.  ಈ ವರ್ಷ ಆರಂಭವಾಗಲಿರುವ ವಸತಿ ಶಾಲೆಗಳ ನೇಮಕಾತಿಯು ಸೇರಿದಂತೆ  13,205 ಹುದ್ದೆಗಳ ನೇಮಕಾತಿಗೆ ಪ್ರಕ್ರಿಯೇ ಪ್ರಾರಂಭವಾಗಿದ್ದು.  ಈ ನೇಮಕಾತಿಯಿಂದಾಗಿ ಈಗಾಗಲೇ ಹೊರಗುತ್ತಿಗೆಯಿಂದ ಕಾರ್ಯನಿರ್ವಹಿಸುತ್ತಿರುವ ಯಾವುದೇ ಸಿಬ್ಬಂದಿಗಳಿಗೂ ತೊಂದರೆಯಾಗುವುದಿಲ್ಲ ಎಂದು ಸಚಿವರು ಸ್ಪಷ್ಪಪಡಿಸಿದರು.

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s