ಟ್ರೀಟ್‍ಮೆಂಟ್ ಪಸ್ಟ್- ಪೇಮೆಂಟ್ ನೆಕ್ಸ್ಟ್

 

ಸರ್ಕಾರ ಆರೋಗ್ಯ ಇಲಾಖೆಯ ಸುಧಾರಣೆ ಹಾಗೂ ಸೇವಾ ವ್ಯವಸ್ಥೆಯನ್ನು ಉನ್ನತೀಕರಿಸಲು ರಾಜ್ಯ ಸರ್ಕಾರ ಹಲವು ಉಪಕ್ರಮಗಳನ್ನು ಕೈಗೊಂಡಿದೆ. ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳ  ಚಿಕಿತ್ಸಾ ಸೇವೆಗಳು ಸಾಮಾನ್ಯರಿಗೂ ದಕ್ಕುವಂತೆ ಯೋಜನೆಗಳನ್ನು ರೂಪಿಸಿದೆ. ಗ್ರಾಮೀಣ ಪ್ರದೇಶದ ಜನರಿಗೂ ಆರೋಗ್ಯ ಸೇವೆಗಳು ಕೈಗೆಟಕುವ ದರದಲ್ಲಿ ಸಿಗುವಂತೆ ಹೊಸ ಕಾಯ್ದೆಯೊಂದನ್ನು ಜಾರಿಗೆ ತರಲು ನಿರ್ಧರಿಸಿದೆ ಈ ಕುರಿತು ಆರೋಗ್ಯ ಸಚಿವ ಕೆ.ಆರ್ ರಮೇಶ್ ಕುಮಾರ್ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

ಖಾಸಗಿ ಆಸ್ಪತ್ರೆಗಳು ಟ್ರೀಟ್‍ಮೆಂಟ್ ಪಸ್ಟ್, ಪೇಮೆಂಟ್‍ನೆಕ್ಸ್ಟ್ ಎಂಬ ತತ್ವದಡಿ ಕಾರ್ಯನಿರ್ವಹಿಸಬೇಕೆಂದು, ಖಾಸಗಿ ಆಸ್ಪತ್ರೆಗಳ ನಿರ್ವಹಣೆ ಕಾಯ್ದೆಯನ್ನು ತಿದ್ದುಪಡಿಗೆ ಒಳಪಡಿಸಲು ಸರ್ಕಾರ ನಿರ್ಧರಿಸಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಆರ್.ರಮೇಶ್ ಕುಮಾರ್ ಅವರು ತಿಳಿಸಿದರು.

ಕೋಲಾರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಶುಕ್ರವಾರ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ, ನೌಕರರ ಸಂಘದ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ವೈಜ್ಞಾನಿಕ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಮಿತಿ ರಚನೆ:

ಕಾಯ್ದೆಗೆ ತಿದ್ದುಪಡಿ ತಂದು ಜೂನ್‍ನಲ್ಲಿ ನಡೆಯಲಿರುವ ವಿಧಾನ ಸಭಾ ಅಧಿವೇಶನದಲ್ಲಿ ಮಂಡಿಸಲಾಗುವುದು. ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗುವುದು. ಕಾಯ್ದೆ ಜಾರಿಯ ನಂತರ ಯಾವ ಚಿಕಿತ್ಸೆಗೆ ಎಷ್ಟು ಹಣ ಎಂಬ ಕುರಿತು ಆಸ್ಪತ್ರೆಗಳ ಮುಂದೆ ಪ್ರಕಟಿಸಬೇಕಾಗಿರುತ್ತದೆ. ಚಿಕಿತ್ಸೆ ನೀಡದೆ ಮೊದಲೇ ಹಣ ಕೇಳುವ ಖಾಸಗಿ ಆಸ್ಪತ್ರೆಗಳ ಲೈಸೆನ್ಸ್ ಅನ್ನು ರದ್ದುಗೊಳಿಸಲಾಗುವುದು ಎಂದರು.

ನಕಲಿ ವೈದ್ಯರ ತಡೆಗೆ ಕಮಿಟಿಯನ್ನು ರಚಿಸಲಾಗಿದೆ. ಸರ್ಕಾರವು ಕಮಿಟಿಯ ಮೂಲಕ ರಾಜ್ಯದಲ್ಲಿನ ನಕಲಿ ವೈದ್ಯರ ನಿರ್ಮೂಲನೆ ಮಾಡಲಾಗುವುದು. ಅದರಂತೆ ಹಿಂದೆಯಿಂದ ಆಯುರ್ವೇದದ ಮೂಲಕ ಚಿಕಿತ್ಸೆ ನೀಡಿಕೊಂಡು ಬಂದವರು ಮುಂದುವರೆಯಬಹುದಾಗಿದೆ ಎಂದು ಹೇಳಿದರು.

ಸರ್ಕಾರ ಕ್ರಮ:

ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಲಾಗುವುದು. ಒಂದುವರೆ ತಿಂಗಳ ಒಳಗಾಗಿ ಖಾಲಿ ಇರುವ ಹುದ್ದೆಗಳನ್ನು ತುಂಬಲಾಗುವುದು. ಸರ್ಕಾರಿ ವೈದ್ಯರ ಮೇಲೆ ಹಲ್ಲೆ ನಡೆಸುವವರ ವಿರುದ್ದ ಸರ್ಕಾರ ಕ್ರಮ ಜರುಗಿಸಲಿದೆ. ವೈದ್ಯರು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಿ ಯಾರ ಭಯವೂ ನಿಮಗೆ ಬೇಡ ಸರ್ಕಾರ ನಿಮ್ಮ ಪರವಾಗಿ ಇರುತ್ತದೆ ಎಂದರು.

ಓರಿಯನ್‍ಟೇಷನ್ ಟೆಸ್ಟ್:

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾಧಿಕಾರಿಗಳು ಹಣ, ಶಿಪಾರಸ್ಸಿನ ಮೂಲಕ ಅಧಿಕಾರಕ್ಕೆ ಬಂದಿರುತ್ತಾರೆ. ಸ್ಟೆತಾಸ್ಕೋಪ್ ಹಿಡಿದು ಎಷ್ಟು ವರ್ಷಗಳು ಕಳೆದಿವೆಯೋ ಏನೋ, ಹಾಗಾಗಿ ಇವರಿಗೆ ಓರಿಯನ್‍ಟೇಷನ್ ಟೆಸ್ಟ್ ನೀಡಲು ಚಿಂತಿಸಲಾಗಿದೆ. ರಾಜ್ಯದಲ್ಲಿ ಒಟ್ಟು 2354 ಪ್ರಾಥಮಿಕ ಆರೋಗ್ಯ ಕೇಂದ್ರಗಳು, 206 ಸಮುದಾಯ ಕೇಂದ್ರಗಳು, 146 ತಾಲ್ಲೂಕು ಆಸ್ಪತ್ರೆಗಳು, 31 ಜಿಲ್ಲಾ ಆಸ್ಪತ್ರೆಗಳು ಇವೆ ಎಂದು ಸಚಿವರು ತಿಳಿಸಿದರು.

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s