ವಿಜಯಪುರ ಮಹಿಳಾ ವಿವಿಗೆ ಅಕ್ಕಮಹಾದೇವಿ ಹೆಸರು

ವಿಜಯಪುರ ಮಹಿಳಾ ವಿಶ್ವ ವಿದ್ಯಾಲಯಕ್ಕೆ ಜೂನ್ 11ರಂದು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಅಧಿಕೃತವಾಗಿ ಅಕ್ಕ ಮಹಾದೇವಿ ಹೆಸರು ಘೋಷಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರಾದ ಬಸವರಾಜ ರಾಯರಡ್ಡಿ ಹೇಳಿದರು. akk.sim
ಶಿಕಾರಿಪುರ ತಾಲೂಕು ಉಡುತಡಿಯಲ್ಲಿ ಅಕ್ಕಮಹಾದೇವಿ ಸಂಶೋಧನಾ ಕೇಂದ್ರ, ಕೌಶಲ್ಯ ಅಭಿವೃದ್ಧಿ ಮತ್ತು ವಿಸ್ತರಣಾ ಕೇಂದ್ರವನ್ನು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಉದ್ಘಾಟಿಸಿ ಮಾತನಾಡಿದರು.
412 ಸರ್ಕಾರಿ ಪದವಿ ಕಾಲೇಜುಗಳು ಹಾಗೂ 12 ಸ್ವಾಯತ್ತ ಕಾಲೇಜಿನ 1.50 ಲಕ್ಷ ವಿದ್ಯಾರ್ಥಿಗಳು ಉಚಿತ ಲ್ಯಾಪ್ ಟಾಪ್ ಪಡೆಯುವರು. ಪದವಿ ಕಲಿಯುತ್ತಿರುವ ಪ್ರಥಮ ವರ್ಷದ ವಿದ್ಯಾರ್ಥಿಗಳು ಪ್ರಯೋಜನಕ್ಕೆ ಅರ್ಹರು.ಸರ್ಕಾರ ಈ ಯೋಜನೆಗಾಗಿ 300ಕೋಟಿ ರೂ ವೆಚ್ಚ ಮಾಡುತ್ತಿದೆ ಎಂದು ಸಚಿವರು ಹೇಳಿದರು.
raireddy-3ತಲಾ 25 ಕೋಟಿ ವೆಚ್ಚದಲ್ಲಿ 20 ವಸತಿ ಕಾಲೇಜುಗಳ ಆರಂಭಿಸಲು ನಿರ್ಧರಿಸಲಾಗಿದೆ. ಮೊದಲ ಹಂತದಲ್ಲಿ 10 ವಸತಿ ಕಾಲೇಜು ಗಳನ್ನು ಆರಂಭಿಸಲಾಗುವುದು ಎಂದರು. ಕರ್ನಾಟಕ ರಾಜ್ಯ ವಿಶ್ವ ವಿದ್ಯಾಲಯಗಳಿಗೆ ಏಕರೂಪ ಕಾಯ್ದೆ ತರಲಾಗುವುದು. ಏಕರೂಪ ಕಾಯ್ದೆಯಿಂದ ವಿಶ್ವ ವಿದ್ಯಾಲಯಗಳಲ್ಲಿ ಗೋಂದಲ ನಿವಾರಣೆಯಾಗಲಿದೆ ಎಂದು ನುಡಿದ ಸಚಿವರು ರಾಜ್ಯ ಸರ್ಕಾರ ಉನ್ನತ ಶಿಕ್ಷಣದ ಅಭಿವೃದ್ದಿಗೆ 30ಸಾವಿರ ಕೋಟಿ ರೂಪಾಯಿಗಳನ್ನು ವೆಚ್ಚ ಮಾಡುತ್ತಿದೆ ಎಂದರು.
ರಾಜ್ಯದ 412 ಸರ್ಕಾರಿ ಪದವಿ ಕಾಲೇಜುಗಳಲ್ಲಿ 102 ಕಾಲೇಜುಗಳಿಗೆ ಕಟ್ಟಡ ಇಲ್ಲ 3.50 ಸಾವಿರ ಕೋಟಿ ವೆಚ್ಚದಲ್ಲಿ ಕಟ್ಟಡ ನಿರ್ಮಾಣ ಮಾಡಲಾಗುವುದು ಎಂದು ಸಚಿವರು ನುಡಿದರು.

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s