ಜಿಲ್ಲಾ ಕೇಂದ್ರಕ್ಕೆ ‘ಸವಿರುಚಿ ಕೈ ತುತ್ತು’

ಬಿಬಿಎಂಪಿ ವ್ಯಾಪ್ತಿಯಲ್ಲಿ ಇಂದಿರಾ ಕ್ಯಾಂಟೀನ್ ಕಾರ್ಯಾರಂಭ ಮಾಡಿದ ಬಳಿಕ ಜಿಲ್ಲಾ ಮಟ್ಟದಲ್ಲಿ ಸಂಚಾರಿ ಕ್ಯಾಂಟೀನ್ ‘ಸವಿರುಚಿ ಕೈ ತುತ್ತು’ ಜಾರಿ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಕುರಿತು ಪತ್ರಿಕಾ ವರದಿ ಇಲ್ಲಿದೆ. Advertisements

ಎಲ್ಲ ವಿಶ್ವ ವಿದ್ಯಾಲಯಗಳಲ್ಲಿ ಕನ್ನಡ ಕಡ್ಡಾಯಕ್ಕೆ ಸೂಚನೆ

ವೈದ್ಯಕೀಯ ವಿದ್ಯಾರ್ಥಿಗಳಿಗೆ ಪ್ರಸಕ್ತ ವರ್ಷದಿಂದಲೇ ಕನ್ನಡವನ್ನು ಒಂದು ಭಾಷೆಯಾಗಿ ಕಲಿಸಲು ರಾಜೀವ್ ಗಾಂಧಿ ಆರೋಗ್ಯ ವಿಶ್ವ ವಿದ್ಯಾಲಯ ನಿರ್ಧರಿಸಿದೆ. ವಿಶ್ವ ವಿದ್ಯಾಲಯದ ಆಡಳಿತದಲ್ಲಿ ಕನ್ನಡ ಭಾಷೆ ಅನುಷ್ಠಾನಕ್ಕೆ ತರಲು ಕನ್ನಡ ಅಭಿವೃದ್ದಿ ಪ್ರಾಧಿಕಾರ ಸೂಚಿಸಿತ್ತು.

ಕೆರೆಗಳ ಡಿ ನೋಟಿಫಿಕೇಶನ್ ಇಲ್ಲ

ಕೆರೆಗಳ ಡಿ ನೋಟಿಫಿಕೇಶನ್ ಪ್ರಸ್ತಾವನೆಯನ್ನು ಕೈ ಬಿಡಲು ನಿರ್ಧರಿಸಲಾಗಿದೆ, ಆದ್ದರಿಂದ ಕೆರೆಗಳ ಮೇಲೆ ಸಾರ್ವಜನಿಕರಿಗೆ ಇರುವ ಹಕ್ಕನ್ನು ಬದಲಿಸುವ ಅಥವಾ ರದ್ದು ಪಡಿಸುವ ಯಾವುದೇ ಉದ್ದೇಶ ಸರ್ಕಾರಕ್ಕೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟ ಪಡಿಸಿದ್ದಾರೆ. ಈ ಕುರಿತು ದಿನಪತ್ರಿಕೆಗಳ ವರದಿ ಇಲ್ಲಿದೆ.

ಎಲಿವೇಟ್ 100 ನವೋದ್ಯಮಕ್ಕೆ ಹೆದ್ದಾರಿ

ನವೋದ್ಯಮಗಳಿಗೆ ರಾಜ್ಯ ಸರ್ಕಾರದ ಐಟಿ ನೀತಿ ಆಶಾದಾಯಕವಾಗಿದ್ದು, ಹೆಚ್ಚು ಬಂಡವಾಳ ಹೂಡಿಕೆಯನ್ನು ಆಕರ್ಷಿಸಲಾಗುತ್ತಿದೆ. ಐಟಿ ಇಲಾಖೆ ಎಲಿವೇಟ್ 100 ಎಂಬ ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ ಆಯೋಜಿಸಿತ್ತು. ಈ ಕುರಿತ ಪತ್ರಿಕಾ ವರದಿ ಇಲ್ಲಿದೆ.

ಮೈಸೂರು:ಮುಖ್ಯಮಂತ್ರಿಗಳಿಂದ ಕಾಮಗಾರಿಗಳ ಪ್ರಗತಿ ಪರಿಶೀಲನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನ ವಿವಿಧ ಸ್ಥಳಗಳಿಗೆ ಇಂದು ಬೆಳಗ್ಗೆ ಭೇಟಿ ನೀಡಿ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲಿಸಿದರು. ಸಿದ್ದಾರ್ಥ ಬಡಾವಣೆಗೆ ಭೇಟಿ ನೀಡಿದ ಮುಖ್ಯಮಂತ್ರಿಗಳು ಜಿಲ್ಲಾಧಿಕಾರಿಗಳ ಕಚೇರಿ ಕಟ್ಟಡ ಕಾಮಗಾರಿ ಪರಿಶೀಲಿಸಿದರು. ಡಿಸೆಂಬರ್ ವೇಳೆಗೆ ಕಾಮಗಾರಿ ಪೂರ್ಣಗೊಳಿಸುವಂತೆ ಅವರು ಲೋಕೋಪಯೋಗಿ ಇಲಾಖೆ ಅಧಿಕ್ಷಕ ಎಂಜಿನಿಯರ್ ಸತ್ಯನಾರಾಯಣ ಅವರಿಗೆ ಸೂಚಿಸಿದರು. ಬಳಿಕ ಬನ್ನೂರು ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ ಮೆಗಾ ಡೈರಿ ಕಟ್ಟಡದ ಕಾಮಗಾರಿಯ ಪ್ರಗತಿ ಪರಿಶೀಲಿಸಿದರು. ಕಾಮಗಾರಿಯಲ್ಲಿ ಗುಣಮಟ್ಟ ಕಾಪಾಡಿ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಸೂಚಿಸಿದರು.

ಸರ್ವರಿಗೂ ಆರೋಗ್ಯ ಭಾಗ್ಯ ಯೋಜನೆ ಜಾರಿ ಕುರಿತು ಸಚಿವ ಸಂಪುಟದ ನಿರ್ಧಾರ :ಪತ್ರಿಕಾ ವರದಿಗಳು

 

ಅಕ್ಟೋಬರ್ ೨ರಿಂದ ಮಾತೃಪೂರ್ಣ ಯೋಜನೆ

ಗರ್ಭಿಣಿಯರು ಮತ್ತು ನವಜಾತ ಶಿಶುಗಳ ಅಪೌಷ್ಟಿಕತೆಯಿಂದ ಬಳಲುವುದನ್ನು ತಪ್ಪಿಸುವ ಸಲುವಾಗಿ ಮಾತೃಪೂರ್ಣ ಯೋಜನೆ ಜಾರಿಗೆ ತರಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ತೀರ್ಮಾನಿದೆ. ಅಕ್ಟೋಬರ್ ೨ರಿಂದ ಮಾತೃಪೂರ್ಣ ಯೋಜನೆಯಲ್ಲಿ ಗರ್ಭಿಣಿಯರಿಗೆ ಬಿಸಿಯೂಟ ಒದಗಿಸಲಾಗುವುದು.