ಘಟಿಕೋತ್ಸವದಲ್ಲಿ ಉಪ ರಾಷ್ಟ್ರಪತಿ ಹಮೀದ್ ಅನ್ಸಾರಿ

ಉಪ ರಾಷ್ಟ್ರಪತಿ ಹಮೀದ್ ಅನ್ಸಾರಿ ಅವರು ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯ ಕಾನೂನು ಘಟಿಕೋತ್ಸವದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಪ್ರದಾನ ಮಾಡಿದರು. ಸಮಾರಂಭದಲ್ಲಿ ರಾಜ್ಯಪಾಲರಾದ ವಜೂಭಾಯಿ ವಾಲಾ, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಟಿ ಬಿ ಜಯಚಂದ್ರ ಉಪಸ್ಥಿತರಿದ್ದರು. ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯ 25ನೇ ವಾರ್ಷಿಕ ಘಟಿಕೋತ್ಸವ ಸಮಾರಂಭ ಪೆಸಿಟ್ ಆಡಿಟೋರಿಯಂನಲ್ಲಿ ಜರುಗಿತು.   Advertisements

ಮೇಯರ್ ಕಪ್ ನ್ಯಾಷನಲ್ ವಾಲಿಬಾಲ್ ಟೂರ್ನಮೆಂಟ್ ಸಿಎಂ ಚಾಲನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇಯರ್ ಕಪ್ ನ್ಯಾಷನಲ್ ವಾಲಿಬಾಲ್ ಟೂರ್ನಮೆಂಟ್ ಗೆ ದೀಪ ಬೆಳಗಿಸಿ ಚಾಲನೆ ನೀಡಿದರು. ಟೂರ್ನಮೆಂಟ್ ಗೆ ಚಾಲನೆ ನೀಡಿದ ಸಂದರ್ಭ ಮುಖ್ಯಮಂತ್ರಿಗಳು ಕ್ರೀಡಾಪಟುಗಳ ಕೈ ಕುಲುಕಿ ಶುಭ ಕೋರಿದರು

ಸಿಎಂ ನಗರ ಪ್ರದಕ್ಷಿಣೆ ಪತ್ರಿಕೆಗಳಲ್ಲಿ ಕಂಡಂತೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರು ನಗರ ಪ್ರದಕ್ಷಿಣೆ ನಡೆಸಿ ಬಿಬಿಎಂಪಿ ಹಾಗೂ ನಗರೋತ್ಥಾನ ಯೋಜನೆಯಡಿ ಪ್ರಗತಿಯಲ್ಲಿರುವ ಅಭಿವೃದ್ದಿ ಕಾಮಗಾರಿಗಳನ್ನು ಪರಿಶೀಲಿಸಿದರು.  

ಪ್ರೆಸ್ ಕ್ಲಬ್ ಸುವರ್ಣ ಸಂಭ್ರಮಕ್ಕೆ ಸಿಎಂ ಚಾಲನೆ

  ಬೆಂಗಳೂರು ಪ್ರೆಸ್ ಕ್ಲಬ್ ಸುವರ್ಣ ಸಂಭ್ರಮದ ಸಡಗರದಲ್ಲಿದೆ.ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.ಸಚಿವರಾದ ಕೆ ಜೆ ಜಾರ್ಜ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಅರಮನೆ ಮೈದಾನದ ಗಾಯಿತ್ರಿ ವಿಹಾರದಲ್ಲಿ ಸುವರ್ಣ ಮಹೋತ್ಸವ ಕಾರ್ಯಕ್ರಮ ನಡೆಯಿತು. ಸುವರ್ಣ ಲಾಂಛನ ಬಿಡುಗಡೆ   ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರು ಪ್ರೆಸ್ ಕ್ಲಬ್ ನ ಸುವರ್ಣ ಮಹೋತ್ಸವ ಲಾಂಛನವನ್ನು ಬಿಡುಗಡೆಗೊಳಿಸಿದರು. ಇದೇ ಸಂದರ್ಭದಲ್ಲಿ ಪತ್ರಿಕಾ ರಂಗದ ಸಾಧಕರನ್ನು ಮುಖ್ಯಮಂತ್ರಿಗಳು ಸನ್ಮಾನಿಸಿದರು.   ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು … More ಪ್ರೆಸ್ ಕ್ಲಬ್ ಸುವರ್ಣ ಸಂಭ್ರಮಕ್ಕೆ ಸಿಎಂ ಚಾಲನೆ