ಸಿಎಂ ಜನತಾ ದರ್ಶನ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನತಾ ದರ್ಶನದಲ್ಲಿ ಸಾರ್ವಜನಿಕ ಅಹವಾಲುಗಳನ್ನು ಸ್ವೀಕರಿಸಿ, ಆಲಿಸಿದರು. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಾರ್ವಜನಿಕರು ಮುಖ್ಯಮಂತ್ರಿಗಳಿಗೆ ಅಹವಾಲು ಸಲ್ಲಿಸಿದರು. Advertisements

‘ಕುರುಕ್ಷೇತ್ರ’ ಚಿತ್ರೀಕರಣಕ್ಕೆ ಕ್ಲಾಪ್ ಮಾಡಿದ ಸಿಎಂ- ವಿಡಿಯೊ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕನ್ನಡ ಚಲನಚಿತ್ರ ‘ಕುರುಕ್ಷೇತ್ರ’ ಚಿತ್ರೀಕರಣಕ್ಕೆ ಕ್ಲಾಪ್ ಮಾಡುವ ಮೂಲಕ ಶುಭ ಕೋರಿದರು. ಈ ಸಂದರ್ಭದ ವಿಡಿಯೊ ಇಲ್ಲಿದೆ.

ರಾಜ್ಯದಲ್ಲಿ ಸಾಂಸ್ಕೃತಿಕ ನೀತಿ ಜಾರಿಗೆ ಸರ್ಕಾರ ಆಸಕ್ತಿ

ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಜೊತೆ ಜೊತೆಯಾಗಿ ಕೊಂಡೊಯ್ಯುವುದರೊಂದಿಗೆ ಒಟ್ಟಾರೆ ಬೆಳವಣಿಗೆಗೆ ಪೂರಕವಾಗುವಂತೆ ರಾಜ್ಯದಲ್ಲಿ ಪ್ರತ್ಯೇಕ ಸಾಂಸ್ಕೃತಿಕ ನೀತಿಯನ್ನು ಜಾರಿಗೆ ತರಲು ಸರ್ಕಾರ ನಿರ್ಧರಿಸಿದೆ. ಈ ಕುರಿತು ಪಡೆಯಲಾಗಿರುವ ವರದಿಯ ಬಗ್ಗೆ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಿದೆ.  

ಮಕ್ಕಳ ಸ್ನೇಹಿ ನ್ಯಾಯಾಲಯ ಬೆಂಗಳೂರಿನಲ್ಲಿ

ಮಕ್ಕಳ ಸ್ನೇಹಿ ನ್ಯಾಯಾಲಯವನ್ನು ಬೆಂಗಳೂರು ನಗರದಲ್ಲಿ ಆರಂಭಿಸಲಾಗಿದೆ. ಈ ಮೂಲಕ ಕರ್ನಾಟಕ ರಾಜ್ಯಕ್ಕೆ ಮಾದರಿಯಾಗಿದೆ ಎಂದು ಪತ್ರಿಕೆಗಳು ಸಂಪಾದಕೀಯದಲ್ಲಿ ಉಲ್ಲೇಖಿಸಿವೆ.

ದಲಿತ ಕಾಲೋನಿಗಳಿಗೆ ಉಚಿತ ನೀರು ಭಾಗ್ಯ

ದಲಿತ ಕಾಲೋನಿಗಳಿಗೆ ಉಚಿತ ನೀರು ಒದಗಿಸುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯ ವರದಿಯನ್ನು ಜಲಮಂಡಳಿ ಸರ್ಕಾರಕ್ಕೆ ಸಲ್ಲಿಸಿದೆ.

ಸರ್ಕಾರಿ ಆವರಣದಲ್ಲಿ ಜನೌಷದ ಮಳಿಗೆ ಕೇಂದ್ರ

ಸರ್ಕಾರಿ ಆಸ್ಪತ್ರೆಗಳಲ್ಲಿ ಜನೌಷಧ ಮಳಿಗೆಗಳನ್ನು ತೆರೆಯಲಾಗುತ್ತಿದೆ. ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್ ಜನರಿಕ್ ಔಷಧ ಮಳಿಗೆಗಳನ್ನು ಆಸ್ಪತ್ರೆಗಳಲ್ಲಿ ಆರಂಭಿಸಲಿದೆ.

ಕೆ ಪಿ ಎಸ್ ಸಿ ಅರ್ಜಿ ಸಲ್ಲಿಕೆ ಇನ್ನು ಸರಳ

ಕರ್ನಾಟಕ ಲೋಕ ಸೇವಾ ಆಯೋಗ ಮಾಹಿತಿ ಡಿಜಿಟಲೀಕರಣಗೊಳಿಸಿದೆ ಮತ್ತು ಪರೀಕ್ಷಾ ಶುಲ್ಕ ಕಟ್ಟಿಸಿಕೊಳ್ಳಲು ಇ ಪೇಮೆಂಟ್ ವ್ಯವಸ್ಥೆಯನ್ನು ಜಾರಿಗೆ ತಂದಿದೆ. ಈ ಕುರಿತ ಪತ್ರಿಕಾ ವರದಿ ಇಲ್ಲಿದೆ.