ಶೀಘ್ರವೇ ತುಂಗಭದ್ರಾ ಜಲಾನಯನ ಪ್ರದೇಶಗಳಿಗೆ ನೀರು

maxresdefault

ತುಂಗಭದ್ರಾ ಜಲಾಶಯದಿಂದ ಜಲಾನಯನ ಪ್ರದೇಶಗಳಿಗೆ ನಾಲೆಗಳ ಮೂಲಕ ನೀರು ಹರಿಸುವ ಕುರಿತು ಸಭೆ ನಡೆಸಿ ನಂತರ ನಿರ್ಧರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಜಲಾಶಯದಲ್ಲಿ ನೀರು ಸಂಗ್ರಹ ಕಡಿಮೆ ಇದೆ, ಆದ್ದರಿಂದ ಕೃಷಿ ಬೆಳೆಯ ಕುರಿತು ಕೃಷಿ ಇಲಾಖೆಯವರ ಜೊತೆ ಚರ್ಚಿಸಿ ನಿರ್ಧರಿಸಲಾಗುವುದು. ಪೈಪ್ ಗಳ ಮೂಲಕ ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ಕಾರ್ಯಗತಗೊಳಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

siddaramaiah_karnatka-CM

ಮೋಡ ಬಿತ್ತನೆ:

ಆಲಮಟ್ಟಿ ಜಲಾಶಯ ತುಂಬಿದೆ, ಇದೇ ತಿಂಗಳ 18ರಂದು ಭಾಗೀನ ಸಲ್ಲಿಸಲಾಗುವುದು, ಮಳೆ ಕೊರತೆಯಿರುವ ಕಡೆಗಳಲ್ಲಿ ಮೋಡ ಬಿತ್ತನೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿಗಳು ಹೇಳಿದರು. ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ವೇತನ ಆಯೋಗ ರಚಿಸಲಾಗಿದ್ದು, ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ನುಡಿದರು.

ಬಳ್ಳಾರಿ ಜಿಂದಾಲ್ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿಗಳು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

b0f2a530-f35f-4371-a17b-5eb74ed0f3e2

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s