ಕೇಂದ್ರ ಸಚಿವರ ಭೇಟಿಯ ನಂತರ ದೆಹಲಿಯಲ್ಲಿ ಮಾಧ್ಯಮಗಳಿಗೆ ಸಿಎಂ ಪ್ರತಿಕ್ರಿಯೆ

ರಾಜ್ಯದ ರೈಲ್ವೇ ಯೋಜನೆ ಹಾಗೂ ವಿಪತ್ತು ಪರಿಹಾರ ನಿಧಿ ಹಂಚಿಕೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ರೈಲ್ವೇ ಸಚಿವರಾದ ಸುರೇಶ್ ಪ್ರಭು ಮತ್ತು ಕೇಂದ್ರ ಗೃಹ ಖಾತೆ ಸಚಿವರಾದ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.   ನಂತರ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದರು. ಈ ಸಂದರ್ಭದ ಧ್ವನಿ ಮುದ್ರಿಕೆ ಇಲ್ಲಿದೆ. Advertisements

ಸಿಎಂ – ಕೇಂದ್ರ ಗೃಹ ಸಚಿವರ ಭೇಟಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಗೃಹ ಸಚಿವರಾದ ರಾಜನಾಥ್ ಸಿಂಗ್ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿದರು. ಈ ಸಂದರ್ಭದಲ್ಲಿ ರಾಜ್ಯಕ್ಕೆ ವಿಪತ್ತು ಪರಿಹಾರ ನಿಧಿ ಹಂಚಿಕೆಯ ಕುರಿತು ಸಚಿವರೊಂದಿಗೆ ಚರ್ಚಿಸಿದರು

ಸಿಎಂ – ಕೇಂದ್ರ ರೈಲ್ವೆ ಸಚಿವರ ಭೇಟಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವರಾದ ಸುರೇಶ್ ಪ್ರಭು ಅವರನ್ನು ಭೇಟಿಯಾಗಿ ಮಾತು-ಕತೆ ನಡೆಸಿದರು. ಈ ಸಂದರ್ಭದಲ್ಲಿ ರಾಜ್ಯದ ರೈಲ್ವೆ ಯೋಜನೆಗಳ ಬಗ್ಗೆ ಸಚಿವರೊಂದಿಗೆ ಚರ್ಚಿಸಿದರು