ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಚಾಲನೆ

ತುಮಕೂರು ನಗರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ, ಶಿಲಾನ್ಯಾಸ ನೆರವೇರಿಸಿ ವೇದಿಕೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಚಿವರಾದ ಟಿ ಬಿ ಜಯಚಂದ್ರ ಮತ್ತು ಗಣ್ಯರು ಈ ಸಂದರ್ಭದಲ್ಲಿ ಹಾಜರಿದ್ದರು. Advertisements

ಸಿಎಂ ಜನತಾ ದರ್ಶನ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನತಾ ದರ್ಶನದಲ್ಲಿ ಸಾರ್ವಜನಿಕ ಅಹವಾಲುಗಳನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ವಿಕಲಚೇತನರೋರ್ವರು ಮುಖ್ಯಮಂತ್ರಿಗಳಿಗೆ ಅಹವಾಲು ನೀಡಿದರು.

ಸರ್ಕಾರಿ ಗ್ರೂಪ್ ‘ಎ’ ಅಧಿಕಾರಿಗಳ ವಸತಿ ಸಂಕೀರ್ಣ ಉದ್ಘಾಟನೆ

ಸರ್ಕಾರಿ ಗ್ರೂಪ್ ‘ಎ’ ಅಧಿಕಾರಿಗಳ ವಸತಿ ಸಂಕೀರ್ಣ (ಹಂತ-1) ಉದ್ಘಾಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೆರವೇರಿಸಿದರು. ಸಚಿವರಾದ ಎಚ್ ಆಂಜನೇಯ, ಆರ್ ರೋಶನ್ ಬೇಗ್ ಈ ಸಂದರ್ಭದಲ್ಲಿ ಹಾಜರಿದ್ದರು.ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆ ವಸತಿ ಸಂಕೀರ್ಣವನ್ನು ಬೆಂಗಳೂರಿನಲ್ಲಿ ನಿರ್ಮಿಸಿದೆ.

ತುಮಕೂರು:ವಸತಿ ಸಂಕೀರ್ಣ ಲೋಕಾರ್ಪಣೆ

ಕೊಳಚೆ ನಿರ್ಮೂಲನಾ ಮಂಡಳಿ ತುಮಕೂರು ಜಿಲ್ಲೆಯ ದಿಬ್ಬೂರಿನಲ್ಲಿ ನಿರ್ಮಿಸಿರುವ ವಸತಿ ಸಂಕೀರ್ಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆ ಗೊಳಿಸಿದರು. ಈ ಸಂದರ್ಭದಲ್ಲಿ ಸಚಿವರುಗಳಾದ ಟಿ ಬಿ ಜಯಚಂದ್ರ, ಎಂ ಕೃಷ್ಣಪ್ಪ ಹಾಜರಿದ್ದರು.

ಮಲ್ಲಿಕಾರ್ಜುನ ಖರ್ಗೆ ಅವರಿಗೆ ಡಿ ದೇವರಾಜ ಅರಸು ಪ್ರಶಸ್ತಿಯ ಗರಿ

ಮಾಪಣ್ಣ ಮಲ್ಲಿಕಾರ್ಜುನ ಖರ್ಗೆ ಅವರಿಗೆ 2017 ನೇ ಸಾಲಿನ ಡಿ ದೇವರಾಜ ಅರಸು ಪ್ರಶಸ್ತಿ ಲಭಿಸಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪ್ರತೀ ವರ್ಷ ಡಿ ದೇವರಾಜ ಅರಸು ಅವರ ಸಾಧನೆ ಮತ್ತು ಚಿಂತನೆಗಳನ್ನು ಮೈಗೂಡಿಸಿಕೊಂಡವರಿಗೆ ಡಿ ದೇವರಾಜು ಅರಸು ಪ್ರಶಸ್ತಿಯನ್ನು ನೀಡುತ್ತಿದೆ. ರಾಜಕೀಯ ಮತ್ತು ರಾಜಕೀಯೇತರ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಈ ಪುರಸ್ಕಾರ ಸಿಗುತ್ತಿದೆ. ಈ ವರ್ಷ ಎಂ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪ್ರಶಸ್ತಿ ಘೋಷಣೆಯಾಗಿದ್ದು ಆಗಸ್ಟ್ 20ರಂದು ಪ್ರಶಸ್ತಿ ಪ್ರಧಾನ ಸಮಾರಂಭ ಜರುಗಲಿದೆ. 2ಲಕ್ಷ … More ಮಲ್ಲಿಕಾರ್ಜುನ ಖರ್ಗೆ ಅವರಿಗೆ ಡಿ ದೇವರಾಜ ಅರಸು ಪ್ರಶಸ್ತಿಯ ಗರಿ

ಕೃಷ್ಣೆಗೆ ಬಾಗಿನ ಅರ್ಪಿಸಿದ ಸಿಎಂ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಜಯಪುರ ಜಿಲ್ಲೆಯ ಆಲಮಟ್ಟಿ ಜಲಾಶಯಕ್ಕೆ ಭೇಟಿ ನೀಡಿ ಕೃಷ್ಣಾ ನದಿಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು. ಈ ಸಂದರ್ಭದ ವಿಡಿಯೋ ಇಲ್ಲಿದೆ.