ಹಬ್ಬದ ಸಂದರ್ಭ ಕಾನೂನು ಸುವ್ಯವಸ್ಥೆ ಕಾಪಾಡಲು ಸಿಎಂ ಸೂಚನೆ

ಗೌರಿ-ಗಣೇಶ ಮತ್ತು ಬಕ್ರೀದ್ ಹಬ್ಬ ಏಕಕಾಲಕ್ಕೆ ಬಂದಿದೆ. ಹೀಗಾಗಿ ಬಿಗಿ ಬಂದೋಬಸ್ತ್ ಜೊತೆಗೆ ಕಾನೂನು ಸುವ್ಯವಸ್ಥೆ ಕಾಪಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. •ಮುಂಬರುವ ಚುನಾವಣೆ ಹಿನ್ನೆಲೆಯಲ್ಲಿ ಸಣ್ಣ ಅಹಿತಕರ ಘಟನೆಗಳನ್ನು ದೊಡ್ಡದಾಗಿ ಬಿಂಬಿಸಿ ರಾಜಕೀಯ ಲಾಭ ಪಡೆಯಲು ಕೆಲವರು ಪ್ರಯತ್ನ ಮಾಡಬಹುದು. ಅಂತಹ ಘಟನೆಗಳನ್ನು ಸೂಕ್ಷ್ಮವಾಗಿ ಗಮನಿಸಿ ತಕ್ಷಣ ಕ್ರಮ ಕೈಗೊಳ್ಳಬೇಕು. •ಗಣಪತಿ ಪ್ರತಿಷ್ಠಾಪನೆ, ಮರವಣಿಗೆ, ವಿಸರ್ಜನೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತೆ ವಹಿಸಬೇಕು. •ಗೌರಿ-ಗಣೇಶ, ಬಕ್ರೀದ್ ಹಬ್ಬ ಏಕಕಾಲದಲ್ಲಿ ಆಚರಿಸುವುದರಿಂದ ಶಾಂತಿ … More ಹಬ್ಬದ ಸಂದರ್ಭ ಕಾನೂನು ಸುವ್ಯವಸ್ಥೆ ಕಾಪಾಡಲು ಸಿಎಂ ಸೂಚನೆ

ಕಬ್ಬು ನಿಯಂತ್ರಂಣ ಮಂಡಳಿ ಸಭೆ ನಡೆಸಿದ ಸಿಎಂ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ಕಬ್ಬು (ಖರೀದಿ ಮತ್ತು ಸರಬರಾಜು ನಿಯಂತ್ರಣ) ಅಧಿನಿಯಮ 2013 ಮತ್ತು ತಿದ್ದುಪಡಿ ಅಧಿನಿಯಮ 2014ರ ಅನ್ವಯ 2015-16ನೇ ಸಾಲಿನ ಕಬ್ಬು ನಿಯಂತ್ರಣ ಮಂಡಳಿಯ ಸಭೆ ನಡೆಸಿದರು. ಸಭೆಯಲ್ಲಿ ರೈತ ಮುಖಂಡರು ಮತ್ತು ಜನಪ್ರತಿನಿಧಿಗಳು ಪಾಲ್ಗೊಂಡಿದ್ದರು.

ಕಾವೇರಿ ಜಲಾನಯನ ಪ್ರದೇಶದಲ್ಲಿ ಮೋಡ ಬಿತ್ತನೆಗೆ ಸಜ್ಜು

ಇಂದು ಜಲಾನಯನ ಪ್ರದೇಶದಲ್ಲಿ ಮೋಡ ಬಿತ್ತನೆ ಮಾಡಲಾಗುತ್ತಿದೆ. ಸಚಿವ ಹೆಚ್ ಕೆ ಪಾಟೀಲ್ ಮೋಡ ಬಿತ್ತನೆ ಕಾರ್ಯಕ್ರಮವನ್ನು ಉದ್ಘಾಟನೆ ಮಾಡುವರು. ಸಚಿವರಾದ ಕೃಷ್ಣ ಬೈರೇಗೌಡ , ಎಂ ಆರ್ ಸೀತಾರಾಮ್ , ಮೋಡ ಬಿತ್ತನೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಕರ್ನಾಟಕದಲ್ಲಿ ಮೋಡ ಬಿತ್ತನೆಗಾಗಲಿ ಮೋಡಬಿತ್ತನೆಗಾಗಿ ಯಾದಗಿರಿ ಜಿಲ್ಲೆ ಸುರಪೂರ, ಗದಗ ಹಾಗೂ ಬೆಂಗಳೂರಿನಲ್ಲಿ 3-ರೆಡಾರ್ಗಳನ್ನು ಸ್ಥಾಪಿಸಿ ಮೋಡ ಬಿತ್ತನೆ ಮಾಡಲಾಗುತಿದ್ದೆ . ಮೋಡ ಬಿತ್ತನೆ ಎಂದರೇನು ? “ಒಂದರಿಂದ ಹತ್ತು ಮೈಕ್ರಾನ್ ಗಾತ್ರದ ಮಳೆಹನಿಗಳನ್ನು ಕನಿಷ್ಠ 50 ಮೈಕ್ರಾನ್ ಗಾತ್ರಕ್ಕೆ … More ಕಾವೇರಿ ಜಲಾನಯನ ಪ್ರದೇಶದಲ್ಲಿ ಮೋಡ ಬಿತ್ತನೆಗೆ ಸಜ್ಜು

ನೀರಿನ ಮಿತ ಬಳಕೆಗೆ ಸಭೆ, ಸಮಾಲೋಚನೆ ನಂತರ ನಿರ್ಧಾರ

ಲಭ್ಯ ಇರುವ ನೀರನ್ನು ಮಿತವಾಗಿ ಬಳಕೆ ಮಾಡುವ ಕುರಿತು ರೈತರ ಜೊತೆ ಸಭೆ ನಡೆಸಿ, ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಚರ್ಚಿಸಿದ ಬಳಿಕ ತುಂಗಭದ್ರಾ ಜಲಾಶಯದಿಂದ ಕಾಲುವೆಗಳಿಗೆ ನೀರು ಬಿಡುಗಡೆ ಮಾಡುವ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಗಿದೆ. ಜಲಾಶಯದಲ್ಲಿ ನೀರು ಇಟ್ಟಕೊಂಡು ಬಿಡಬಾರದು ಎಂಬ ಉದ್ದೇಶ ಇಲ್ಲ. ನಿರೀಕ್ಷಿತ ಪ್ರಮಾಣದಲ್ಲಿ ನೀರು ಸಂಗ್ರಹವಾಗಿಲ್ಲ. ಹೀಗಾಗಿ ಮಿತವಾಗಿ ಬಳಕೆ ಮಾಡುವ ಕುರಿತು ಸಮಾಲೋಚನೆ ನಡೆಸಿ ತೀರ್ಮಾನ ಮಾಡುವುದು ಸೂಕ್ತ … More ನೀರಿನ ಮಿತ ಬಳಕೆಗೆ ಸಭೆ, ಸಮಾಲೋಚನೆ ನಂತರ ನಿರ್ಧಾರ

ಮಹಾಮಸ್ತಕಾಭಿಷೇಕ ಪೂರ್ವಭಾವಿ ಸಭೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಶ್ರೀ ಕ್ಷೇತ್ರ ಶ್ರವಣಬೆಳಗೊಳದಲ್ಲಿರುವ ಗೊಮಟೇಶ್ವರ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಗೆ 2018ರ ಫೆಬ್ರವರಿ ಮಾಹೆಯಲ್ಲಿ ಜರುಗಲಿರುವ ಮಹಾಮಸ್ತಕಾಭಿಷೇಕ ಸಮಾರಂಭದ ಪೂರ್ವಭಾವಿ ಸಿದ್ಧತೆಗಳ ಕುರಿತು ಚರ್ಚಿಸಲು ರಾಜ್ಯ ಮಟ್ಟದ ಸಮಿತಿ ಸಭೆ ನಡೆಯಿತು. ಸಚಿವರಾದ ಎ. ಮಂಜು, ಉಮಾಶ್ರೀ ಸಭೆಯಲ್ಲಿ ಉಪಸ್ಥಿತರಿದ್ದರು.

ತುಂಗಭದ್ರಾ ಜಲಾಶಯದಿಂದ ನೀರು ಸಿಎಂ ಅಧ್ಯಕ್ಷತೆಯಲ್ಲಿ ಸಭೆ

ತುಂಗಭದ್ರಾ ಜಲಾಶಯದಿಂದ ಕಾಲುವೆಗಳ ಮೂಲಕ ನೀರು ಒದಗಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ  ಸಭೆ ನಡೆಯಿತು. ಕೊಪ್ಪಳ, ರಾಯಚೂರು ಮತ್ತು ಬಳ್ಳಾರಿ ಜಿಲ್ಲೆಗಳ ಶಾಸಕರು, ಸಂಸತ್ ಸದಸ್ಯರು ವಿಧಾನ ಸೌಧದಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡಿದ್ದರು.  

ಇಬ್ರಾಹಿಂಗೆ ಶುಭಾಶಯ ಕೋರಿದ ಮುಖ್ಯಮಂತ್ರಿಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಉಪಸ್ಥಿತಿಯಲ್ಲಿ ಸಿಎಂ ಇಬ್ರಾಹಿಂ ಅವರು ವಿಧಾನ ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಸಿಎಂ ಇಬ್ರಾಹಿಂ ಅವರಿಗೆ ಶುಭಾಶಯ ಕೋರಿದರು.