ಹಬ್ಬದ ಸಂದರ್ಭ ಕಾನೂನು ಸುವ್ಯವಸ್ಥೆ ಕಾಪಾಡಲು ಸಿಎಂ ಸೂಚನೆ

sidda3

ಗೌರಿ-ಗಣೇಶ ಮತ್ತು ಬಕ್ರೀದ್ ಹಬ್ಬ ಏಕಕಾಲಕ್ಕೆ ಬಂದಿದೆ. ಹೀಗಾಗಿ ಬಿಗಿ ಬಂದೋಬಸ್ತ್ ಜೊತೆಗೆ ಕಾನೂನು ಸುವ್ಯವಸ್ಥೆ ಕಾಪಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

•ಮುಂಬರುವ ಚುನಾವಣೆ ಹಿನ್ನೆಲೆಯಲ್ಲಿ ಸಣ್ಣ ಅಹಿತಕರ ಘಟನೆಗಳನ್ನು ದೊಡ್ಡದಾಗಿ ಬಿಂಬಿಸಿ ರಾಜಕೀಯ ಲಾಭ ಪಡೆಯಲು ಕೆಲವರು ಪ್ರಯತ್ನ ಮಾಡಬಹುದು. ಅಂತಹ ಘಟನೆಗಳನ್ನು ಸೂಕ್ಷ್ಮವಾಗಿ ಗಮನಿಸಿ ತಕ್ಷಣ ಕ್ರಮ ಕೈಗೊಳ್ಳಬೇಕು.

•ಗಣಪತಿ ಪ್ರತಿಷ್ಠಾಪನೆ, ಮರವಣಿಗೆ, ವಿಸರ್ಜನೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತೆ ವಹಿಸಬೇಕು.

•ಗೌರಿ-ಗಣೇಶ, ಬಕ್ರೀದ್ ಹಬ್ಬ ಏಕಕಾಲದಲ್ಲಿ ಆಚರಿಸುವುದರಿಂದ ಶಾಂತಿ ಕದಡಬಹುದಾದ ಸಮಾಜ ಘಾತಕ ವ್ಯಕ್ತಿಗಳನ್ನು ಗುರುತಿಸಬೇಕು. ಅವರ ಚಲನವಲನದ ಮೇಲೆ ನಿಗಾ ಇಡಬೇಕು. ಅಗತ್ಯವಾದರೆ ಮುಂಜಾಗ್ರತಾ ಕ್ರಮವಾಗಿ ಬಂಧಿಸಬೇಕು.

•ಹಬ್ಬದ ಆಚರಣೆ ವೇಳೆ ಹಿರಿಯ ಅಧಿಕಾರಿಗಳು ಕೇಂದ್ರ ಸ್ಥಾನ ಬಿಡಬಾರದು. ತಮ್ಮ ಅಧೀನದ ಅಧಿಕಾರಿಗಳು, ಸಿಬ್ಬಂದಿ ಕರ್ತವ್ಯದ ಮೇಲಿರುವಂತೆ ನೋಡಿಕೊಳ್ಳಬೇಕು.

•ಆಯಾ ಜಿಲ್ಲೆಯ ಕಮೀಷನರೇಟ್ ಉಸ್ತುವಾರಿ ಹೊಂದಿರುವ ಅಧಿಕಾರಿಗಳು ಆಗಾಗ ಮೇಲ್ವಿಚಾರಣೆ ನಡೆಸಬೇಕು‌ ಎರಡೂ ಹಬ್ಬಗಳು ಶಾಂತಿಯುತವಾಗಿ ನಡೆಯುವಂತೆ ನೋಡಿಕೊಳ್ಳಬೇಕು.

•ಗಣಪತಿ ವಿಸರ್ಜನೆ ವೇಳೆ ಯಾವುದೇ ಅನಾಹುತ ಸಂಭವಿಸದಂತೆ ಮುಂಜಾಗ್ರತೆ ವಹಿಸಬೇಕು.

•ಕೆರೆ, ನದಿಯಲ್ಲಿ ಗಣಪತಿ ವಿಸರ್ಜಿಸುವಾಗ ಜೀವರಕ್ಷಕ ಸಾಧನಗಳು ಇರಬೇಕು.

•ಹಬ್ಬದ ವೇಳೆ ಪೊಲೀಸ್ ಗಸ್ತು ಸಹ ಬಿಗಿಯಾಗಿರಬೇಕು. ಮತೀಯ ಶಕ್ತಿಗಳ ಮೇಲೂ ಕಣ್ಣಿಡಬೇಕು. ಎಲ್ಲೆಡೆ ಶಾಂತಿ ಸಭೆಗಳನ್ನು ನಡೆಸಬೇಕು. ಉಸ್ತುವಾರಿ ಎಡಿಜಿಪಿಗಳು ತಮಗೆ ನಿಗಧಿಪಡಿಸಿರುವ ಜಿಲ್ಲೆಗಳಿಗೆ ಭೇಟಿ ಕೊಡಬೇಕು ಎಂದು ಮುಖ್ಯಮಂತ್ರಿಗಳು ಹೇಳಿದರು.

ಗೌರಿ-ಗಣೇಶ ಮತ್ತು ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೈಗೊಳ್ಳಬೇಕಾದ ಬಂದೋಬಸ್ತ್ ಕುರಿತು ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿಗಳ ಸಭೆ ನಡೆಸಿದರು.

 

sidda2

 

SIDDA1

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  ಬದಲಿಸಿ )

Google photo

You are commenting using your Google account. Log Out /  ಬದಲಿಸಿ )

Twitter picture

You are commenting using your Twitter account. Log Out /  ಬದಲಿಸಿ )

Facebook photo

You are commenting using your Facebook account. Log Out /  ಬದಲಿಸಿ )

Connecting to %s