ಮೈಸೂರು:ಮುಖ್ಯಮಂತ್ರಿಗಳಿಂದ ಕಾಮಗಾರಿಗಳ ಪ್ರಗತಿ ಪರಿಶೀಲನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನ ವಿವಿಧ ಸ್ಥಳಗಳಿಗೆ ಇಂದು ಬೆಳಗ್ಗೆ ಭೇಟಿ ನೀಡಿ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲಿಸಿದರು. ಸಿದ್ದಾರ್ಥ ಬಡಾವಣೆಗೆ ಭೇಟಿ ನೀಡಿದ ಮುಖ್ಯಮಂತ್ರಿಗಳು ಜಿಲ್ಲಾಧಿಕಾರಿಗಳ ಕಚೇರಿ ಕಟ್ಟಡ ಕಾಮಗಾರಿ ಪರಿಶೀಲಿಸಿದರು. ಡಿಸೆಂಬರ್ ವೇಳೆಗೆ ಕಾಮಗಾರಿ ಪೂರ್ಣಗೊಳಿಸುವಂತೆ ಅವರು ಲೋಕೋಪಯೋಗಿ ಇಲಾಖೆ ಅಧಿಕ್ಷಕ ಎಂಜಿನಿಯರ್ ಸತ್ಯನಾರಾಯಣ ಅವರಿಗೆ ಸೂಚಿಸಿದರು. ಬಳಿಕ ಬನ್ನೂರು ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ ಮೆಗಾ ಡೈರಿ ಕಟ್ಟಡದ ಕಾಮಗಾರಿಯ ಪ್ರಗತಿ ಪರಿಶೀಲಿಸಿದರು. ಕಾಮಗಾರಿಯಲ್ಲಿ ಗುಣಮಟ್ಟ ಕಾಪಾಡಿ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಸೂಚಿಸಿದರು. Advertisements