ಮುಖ್ಯಮಂತ್ರಿಗಳಿಂದ ಪ್ರಗತಿಪರಿಶೀಲನಾ ಸಭೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಣಿಜ್ಯ ತೆರಿಗೆ, ಅಬಕಾರಿ, ಸಾರಿಗೆ, ಮುದ್ರಾಂಕ ಮತ್ತು ನೊಂದಣಿ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಭೆ ನಡೆಯಿತು.   Advertisements

ವ್ಯಕ್ತಿಯ ವಿಕಸನಕ್ಕೆ ಗುರು ಮತ್ತು ಗುರಿ ಬೇಕು:ಸಿಎಂ

ಪ್ರತಿಯೊಬ್ಬ ವ್ಯಕ್ತಿಯ ವಿಕಾಸಕ್ಕೆ ಓರ್ವ ಗುರು ಮತ್ತು ಗುರಿ ಇರಲೇಬೇಕು. ಗುರಿಯಿಲ್ಲದಿದ್ದರೂ ಗುರಿ ತೋರಿಸುವ ಗುರು ಇರಲೇಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, ಬೆಂಗಳೂರು ನಗರ ಜಿಲ್ಲಾ ಪಂಚಾಯತ್, ಜಿಲ್ಲಾ ಆಡಳಿತ ಇಂದು ಸರ್ವಪಲ್ಲಿ ಡಾ ರಾಧಾಕೃಷ್ಣ್ ಅವರ ಜನ್ಮದಿನೋತ್ಸವದ ಅಂಗವಾಗಿ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಫಾಟಿಸಿ ಮಾತನಾಡಿದ ಮುಖ್ಯಮಂತ್ರಿಗಳು, ಶಿಕ್ಷಕರ ವೃತ್ತಿ ಪವಿತ್ರ ವೃತ್ತಿಯಾಗಿದ್ದು, ತಂದೆ ತಾಯಿಯ ನಂತರ ಪೂಜ್ಯನೀಯ ಸ್ಥಾನವನ್ನು … More ವ್ಯಕ್ತಿಯ ವಿಕಸನಕ್ಕೆ ಗುರು ಮತ್ತು ಗುರಿ ಬೇಕು:ಸಿಎಂ

ಶಿಕ್ಷಕ ದಿನಾಚರಣೆಗೆ ಸಿಎಂ ಚಾಲನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ 2017 ನೇ ಸಾಲಿನ ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಚಿವರಾದ ತನ್ವೀರ್ ಸೇಠ್, ಕೆ ಜೆ ಜಾರ್ಜ್ ಉಪಸ್ಥಿತರಿದ್ದರು. ಡಾ ಬಿ ಆರ್ ಅಂಬೇಡ್ಕರ್ ಭವನದಲ್ಲಿ ಶಿಕ್ಷಕ ದಿನಾಚರಣೆ ಕಾರ್ಯಕ್ರಮ ನಡೆಯಿತು.      

ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರುಗಳಿಗೆ ಸಿಎಂ ಪ್ರಶಸ್ತಿ ಪ್ರದಾನ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ ಅಂಗವಾಗಿ ಹೊರ ತಂದ ಸ್ಮರಣ ಸಂಚಿಕೆಯನ್ನು ಬಿಡುಗಡೆಗೊಳಿಸಿ , ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರುಗಳಿಗೆ ಪ್ರಶಸ್ತಿ ಪ್ರದಾನ ಮಾಡಿದರು.    

ಆರ್‍ಟಿಇ ಪ್ರವೇಶ:ಸರ್ಕಾರಿ ಶಾಲೆಗೆ ಪ್ರಾಶಸ್ತ್ಯ ಕೊಡಿ

ಆರ್ ಟಿ ಇ ಕೋಟಾದಡಿ ಪ್ರವೇಶ ಪ್ರಕ್ರಿಯೆ ನಡೆಸುವಾಗ ಸರ್ಕಾರಿ ಶಾಲೆಗಳಿಗೆ ಮೊದಲ ಪ್ರಾಶಸ್ತ್ಯ ನೀಡುವ ಮೂಲಕ, ಅಲ್ಪ ಸಂಖ್ಯಾತವಲ್ಲದ ಅನುದಾನ ರಹಿತ ಶಾಲೆಗಳಿಗೆ ಶೇ.25% ರಷ್ಟು ಸೀಟುಗಳನ್ನು ನೀಡಿ ಸರ್ಕಾರವೇ ಶುಲ್ಕ ಭರಿಸುವ ಯೋಜನೆಯನ್ನು ಕೈ ಬಿಡುವ ಬಗ್ಗೆ ಮರು ಪರಿಶೀಲಿಸಲು ಸರ್ಕಾರ ನಿರ್ಧರಿಸಿದೆ. ಈ ಕುರಿತ ಪತ್ರಿಕಾ ವರದಿ ಇಲ್ಲಿದೆ.

ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ 21 ಶಿಫಾರಸ್ಸು

ರಾಜ್ಯದ ಸರ್ಕಾರಿ ಶಾಲೆಗಳ ಗುಣಮಟ್ಟಕ್ಕೆ ಸಂಬಂಧಿಸಿ ಕನ್ನಡ ಅಭಿವೃದ್ದಿ ಪ್ರಾದಿಕಾರದ ಅಧ್ಯಕ್ಷ ಪ್ರೊ ಎಸ್ ಜಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರಿ ಶಾಲೆಗಳ ಸಬಲೀಕರಣ ಸಮಿತಿ 21 ಶಿಫಾರಸ್ಸುಗಳು ಉಳ್ಳ ವರದಿಯನ್ನು ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿತು. ಈ ವರದಿಯಲ್ಲಿ ಜನಪ್ರತಿನಿಧಿಗಳು ಮತ್ತು ಸರ್ಕಾರಿ ನೌಕರರ ಮಕ್ಕಳು ಕಡ್ಡಾಯವಾಗಿ ಸರ್ಕಾರಿ ಶಾಲೆಯಲ್ಲಿ ಕಲಿಯುವಂತೆ ಸುಗ್ರೀವಾಜ್ಞೆ ತರಲು ವರದಿಯಲ್ಲಿ ಶಿಫಾರಸ್ಸು ಮಾಡಲಾಗಿದೆ.

ಮಾಹಿತಿ ಆಯೋಗದ ಆಯುಕ್ತರಾಗಿ ಡಾ. ಸುಚೇತನ ಸ್ವರೂಪ

ಕರ್ನಾಟಕ ರಾಜ್ಯ ಮಾಹಿತಿ ಆಯೋಗದ ನೂತನ ಮುಖ್ಯ ಆಯುಕ್ತರಾಗಿ ಡಾ. ಸುಚೇತನ ಸ್ವರೂಪ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಅವರು ಪ್ರಮಾಣ ವಚನ ಬೋಧಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರಾದ ಕೆ ಜೆ ಜಾರ್ಜ್, ಮುಖ್ಯ ಕಾರ್ಯದರ್ಶಿ ಡಾ ಸುಭಾಷ್ ಚಂದ್ರ ಕುಂಟಿಅ ಹಾಜರಿದ್ದರು.