ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಹಿನ್ನೆಲೆಯಲ್ಲಿ ಗೃಹ ಇಲಾಖೆಯ ಸಚಿವರು ಮತ್ತು ಪೊಲೀಸ್ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿ, ಕ್ರಮಕ್ಕೆ ಸೂಚನೆ ನೀಡಿದರು. ಸಭೆಯಲ್ಲಿ ಸಚಿವರಾದ ರಾಮಲಿಂಗಾ ರೆಡ್ಡಿ ಉಪಸ್ಥಿತರಿದ್ದರು. Advertisements

ಗೌರಿ ಲಂಕೇಶ್ ಹತ್ಯೆ ತನಿಖೆಗೆ ವಿಶೇಷ ತಂಡ:ಸಿಎಂ

ಹೆಸರಾಂತ ಚಿಂತಕಿ, ಸುಪ್ರಸಿದ್ಧ ವಿಚಾರವಾದಿ ಹಾಗೂ ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆ ಪ್ರಕರಣದ ತನಿಖೆಗೆ ಆರಕ್ಷಕ ಮಹಾ ನಿರೀಕ್ಷಕ ( ಇನ್ಸ್ ಪೆಕ್ಟರ್ ಜನರಲ್ ಆಫ್ ಪೊಲೀಸ್ ) ದರ್ಜೆಯ ಅಧಿಕಾರಿಯ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಪೊಲೀಸ್ ಆರಕ್ಷಕ ಮಹಾ ನಿರ್ದೇಶಕ ಹಾಗೂ ಪೊಲೀಸ್ ಮಹಾ ನಿರೀಕ್ಷಕ ರೂಪಕ್ ಕುಮಾರ್ ದತ್ತ ಅವರಿಗೆ ಇಲ್ಲಿ ಇಂದು ಸೂಚಿಸಿದರು. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನ ಸೌಧದ ತಮ್ಮ ಕೊಠಡಿಯಲ್ಲಿ … More ಗೌರಿ ಲಂಕೇಶ್ ಹತ್ಯೆ ತನಿಖೆಗೆ ವಿಶೇಷ ತಂಡ:ಸಿಎಂ

ಗೌರಿ ಲಂಕೇಶ್ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಸಿಎಂ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನಿನ್ನೆ ದುಷ್ಕರ್ಮಿಗಳ ಗುಂಡಿಗೆ ಬಲಿಯಾದ ಪತ್ರಕರ್ತೆ ಗೌರಿ ಲಂಕೇಶ್ ಮೃತ ದೇಹಕ್ಕೆ ಪುಷ್ಪಗುಚ್ಚ ಇರಿಸಿ ಅಂತಿಮ ದರ್ಶನ ಪಡೆದರು. ಸಚಿವರಾದ ಎಚ್ ಆಂಜನೇಯ, ಉಮಾಶ್ರೀ ಈ ಸಂದರ್ಭದಲ್ಲಿ ಹಾಜರಿದ್ದರು.

ಟ್ರಾಫಿಕ್ ಸಮಸ್ಯೆಗೆ 18 ತಿಂಗಳ ಸಂಶೋಧನೆ

ಟ್ರಾಫಿಕ್ ಮತ್ತು ನೀರು ಸಮಸ್ಯೆಯನ್ನು ಪರಿಹರಿಸಲು ಐಟಿಬಿಟಿ ಇಲಾಖೆ ಗ್ರ್ಯಾಂಡ್ ಚಾಲೆಂಜ್ ಕಾಲ್ 5 ಮತ್ತು 6 ಅನ್ನು ಮಂಗಳವಾರ ಘೋಷಿದೆ. ವಾಹನ ದಟ್ಟಣೆ ಕಡಿಮೆ ಮಾಡುವುದು ಮತ್ತು ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು 18 ತಿಂಗಳ ಸಂಶೋಧನೆ ಕೈಗೊಳ್ಳಲಾಗುತ್ತದೆ. 2015-20 ಸ್ಟಾರ್ಟಪ್ ನೀತಿಯಡಿ ಈ ಯೋಜನೆಯನ್ನು ಘೋಷಿಸಲಾಗಿದೆ. ಈ ಕುರಿತ ವರದಿ ಇಲ್ಲಿದೆ.

ಗೌರಿ ಲಂಕೇಶ್ ಹತ್ಯೆಗೆ ಮುಖ್ಯಮಂತ್ರಿ ಖಂಡನೆ

ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆ ಸುದ್ದಿ ಆಘಾತ ಉಂಟು ಮಾಡಿದೆ. ಇದು ಅತ್ಯಂತ ಹೇಯವಾದ ಕೃತ್ಯ. ಮಾನವೀಯತೆ ಇರುವವರು ಇಂತಹ ಕೃತ್ಯಕ್ಕೆ ಕೈ ಹಾಕುವುದಿಲ್ಲ. ನಾನು ಇದನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಗೌರಿ ಲಂಕೇಶ್ ಪತ್ರಕರ್ತರಾಗಿದ್ದರು. ಜೊತೆಗೆ ವಿಚಾರವಾದಿ, ಸಾಹಿತಿಯೂ ಆಗಿದ್ದರು. ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದರು. ಜಾತ್ಯಾತೀತ ತತ್ವದಲ್ಲಿ ನಂಬಿಕೆ ಇರಿಸಿದ್ದರು. ಅನ್ಯಾಯದ ವಿರುದ್ಧ ಧ್ವನಿ ಎತ್ತಿ ಹೋರಾಟ ಮಾಡುತ್ತಿದ್ದರು. ದುಷ್ಕರ್ಮಿಗಳನ್ನು ಕೂಡಲೇ ಪತ್ತೆ ಹಚ್ಚುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. … More ಗೌರಿ ಲಂಕೇಶ್ ಹತ್ಯೆಗೆ ಮುಖ್ಯಮಂತ್ರಿ ಖಂಡನೆ

ಇಂಗ್ಲಿಷ್ ಕಲಿಕೆಯ ನಡುವೆ ಕನ್ನಡ ಕಡೆಗಣಿಸಬೇಡಿ

ಕನ್ನಡ ಶಾಲೆಗಳನ್ನು ಮುಚ್ಚುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ. ರಾಜ್ಯದಲ್ಲಿ ಸರ್ಕಾರಿ ಶಾಲೆಗಳಲ್ಲಿ 48ಲಕ್ಷ ಮಕ್ಕಳಿಗು, ಅನುದಾನಿತ ಶಾಲೆಗಳಲ್ಲಿ 12 ಲಕ್ಷ ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಆಯೋಜನೆಯಾಗಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಈ ಕುರಿತ ಪತ್ರಿಕಾ ವರದಿ ಇಲ್ಲಿದೆ.