ಗೌರಿ ಲಂಕೇಶ್ ಹತ್ಯೆಗೆ ಮುಖ್ಯಮಂತ್ರಿ ಖಂಡನೆ

ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆ ಸುದ್ದಿ ಆಘಾತ ಉಂಟು ಮಾಡಿದೆ. ಇದು ಅತ್ಯಂತ ಹೇಯವಾದ ಕೃತ್ಯ. ಮಾನವೀಯತೆ ಇರುವವರು ಇಂತಹ ಕೃತ್ಯಕ್ಕೆ ಕೈ ಹಾಕುವುದಿಲ್ಲ. ನಾನು ಇದನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಗೌರಿ ಲಂಕೇಶ್ ಪತ್ರಕರ್ತರಾಗಿದ್ದರು. ಜೊತೆಗೆ ವಿಚಾರವಾದಿ, ಸಾಹಿತಿಯೂ ಆಗಿದ್ದರು. ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದರು. ಜಾತ್ಯಾತೀತ ತತ್ವದಲ್ಲಿ ನಂಬಿಕೆ ಇರಿಸಿದ್ದರು. ಅನ್ಯಾಯದ ವಿರುದ್ಧ ಧ್ವನಿ ಎತ್ತಿ ಹೋರಾಟ ಮಾಡುತ್ತಿದ್ದರು.

ದುಷ್ಕರ್ಮಿಗಳನ್ನು ಕೂಡಲೇ ಪತ್ತೆ ಹಚ್ಚುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಇದಕ್ಕಾಗಿ ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಮೂರು ತಂಡಗಳನ್ನು ರಚಿಸುವಂತೆ ಸೂಚಿಸಿದ್ದೇನೆ.

ದುಷ್ಕರ್ಮಿಗಳನ್ನು ಪತ್ತೆ ಹಚ್ಚಿ ಶಿಕ್ಷೆಗೆ ಗುರಿಪಡಿಸುವ ವಿಚಾರದಲ್ಲಿ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡಲಿದೆ.

ಪೊಲೀಸರ ವರದಿ ಗಮನಿಸಿದ ಬಳಿಕ ಯಾವ ರೀತಿಯ ತನಿಖೆ ನಡೆಸಬೇಕು ಎಂಬುದರ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು.

ಗೃಹ ಸಚಿವರು, ನಗರ ಪೊಲೀಸ್ ಆಯುಕ್ತರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಮಗೆ ಪ್ರಾಣ ಬೆದರಿಕೆ ಇದೆ. ರಕ್ಷಣೆ ಕೊಡಿ ಎಂದು ಗೌರಿ ಅವರು ಪೊಲೀಸರನ್ನು ಕೇಳಿರಲಿಲ್ಲ. ಗೌರಿ ಲಂಕೇಶ್ ಅವರು ಅನೇಕ ಬಾರಿ ನನ್ನನ್ನು ಭೇಟಿಯಾಗಿದ್ದರು. ಆಗಲೂ ಹೇಳಿರಲಿಲ್ಲ ಎಂದು ಮುಖ್ಯ ಮಂತ್ರಿ ಗಳು ಹೇಳಿದರು.

Condolence

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

Connecting to %s