ಬೆಳೆ ಪರಿಹಾರ ಕೋರಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ ರಾಜ್ಯದ ನಿಯೋಗ

ಸಚಿವರಾದ ಎಸ್ ಎಸ್ ಮಲ್ಲಿಕಾರ್ಜುನ್, ಕಾಗೋಡು ತಿಮ್ಮಪ್ಪ ನೇತೃತ್ವದ ನಿಯೋಗ ಕೇಂದ್ರ ಕೃಷಿ ಸಚಿವ ರಾಧಾ ಮೋಹನ್ ಸಿಂಗ್ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿತು. ಈ ಸಂದರ್ಭದಲ್ಲಿ 2016-17ನೇ ಸಾಲಿನ ಬರ ಪರಿಸ್ಥಿತಿಯಿಂದ ರಾಜ್ಯದಲ್ಲಿ ಹಾನಿಯಾಗಿರುವ ತೋಟಗಾರಿಕಾ ಬೆಳೆಗಳಿಗೆ ಕೇಂದ್ರ ಸರ್ಕಾರ ವಿಶೇಷ ಅನುದಾನ ನೀಡಬೇಕೆಂದು ಸಚಿವರಿಗೆ ಮನವಿ ಮಾಡಲಾಯಿತು. Advertisements

ಸಚಿವ ಬೇಗ್, ಹರ್ ದೀಪ್ ಸಿಂಗ್ ಪುರಿಯಲ್ಲಿ ಭೇಟಿ

ಸಚಿವ ಆರ್ ರೋಶನ್ ಬೇಗ್ ಅವರು ವಸತಿ ಮತ್ತು ನಗರ ವ್ಯವಹಾರಗಳ ರಾಜ್ಯ ಖಾತೆ ಕೇಂದ್ರ ಸಚಿವರಾದ ಹರ್ ದೀಪ್ ಸಿಂಗ್ ಅವರನ್ನು ನವದೆಹಲಿಯ ಪುರಿಯಲ್ಲಿ ಭೇಟಿಯಾಗಿ ಚರ್ಚಿಸಿದರು.

ಮೈಸೂರು ದಸರಾ ಉತ್ಸವಕ್ಕೆ ಮುಖ್ಯಮಂತ್ರಿಗಳಿಗೆ ಅಧಿಕೃತ ಆಹ್ವಾನ

ನಾಡಹಬ್ಬ ಮೈಸೂರು ದಸರಾ ಉತ್ಸವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸಕ್ಕೆ ತೆರಳಿ ಸಚಿವ ತನ್ವೀರ್ ಸೇಠ್ ಅವರು ಅಧಿಕೃತವಾಗಿ ಆಹ್ವಾನಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಡಾ ಹೆಚ್ ಸಿ ಮಹದೇವಪ್ಪ ಅವರು ಹಾಜರಿದ್ದರು.

ಸಕ್ಕರೆ ಕಾರ್ಖಾನೆ ಸಮಸ್ಯೆಗಳಿಗೆ ಪರಿಹಾರ,ಸಿಎಂ ಸಭೆ

ಮೈಸೂರು, ಮಂಡ್ಯ ಮತ್ತು ಬೀದರ್ ಜಿಲ್ಲೆಯ ಸಹಕಾರ ಸಕ್ಕರೆ ಕಾರ್ಖಾನೆಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಅಧಿಕಾರಿಗಳು ಹಾಗೂ ಆಯಾ ಭಾಗದ ಶಾಸಕರು, ಸಚಿವರ ಸುದೀರ್ಘ ಸಭೆ ನಡೆಸಿದರು. ಮಂಡ್ಯ ಜಿಲ್ಲೆಯ ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆ ಎದುರಿಸುತ್ತಿರುವ ಸಮಸ್ಯೆಗಳನ್ನು ಕೂಲಂಕಷವಾಗಿ ಆಲಿಸಿದ ಮುಖ್ಯಮಂತ್ರಿಯವರು, ಕಬ್ಬು ನೀಡಿರುವ ರೈತರಿಗೆ ಕೊಡಬೇಕಿರುವ 6.77 ಕೋಟಿ ರೂ.ಗಳ ಹಣವನ್ನು ಕೂಡಲೇ ಬಿಡುಗಡೆ ಮಾಡುವಂತೆ ಹಣಕಾಸು ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಜೊತೆಗೆ ಕಬ್ಬು ಅರೆಯುವಿಕೆ … More ಸಕ್ಕರೆ ಕಾರ್ಖಾನೆ ಸಮಸ್ಯೆಗಳಿಗೆ ಪರಿಹಾರ,ಸಿಎಂ ಸಭೆ

2250 ಕೋಟಿ ರೂ. ವೆಚ್ಚದ ಯೋಜನೆಗಳಿಗೆ ಶೀಘ್ರವೇ ಸಿಎಂ ಚಾಲನೆ

ಪಾವಗಡ, ಚಳ್ಳಕೆರೆ, ಮೊಳಕಾಲ್ಮೂರು, ಕೂಡ್ಲಿಗಿ, ಹೊಸಪೇಟೆ ತಾಲೂಕಿನ ಕೆಲ ಹಳ್ಳಿಗಳು ಮತ್ತು ಚಿತ್ರದುರ್ಗ ತಾಲೂಕಿನ ತುರವನೂರು ಹೋಬಳಿಗೆ ನೀರು ಪೂರೈಸುವ 2250 ಕೋಟಿ ರೂ. ವೆಚ್ಚದ ಯೋಜನೆಯ ಕಾಮಗಾರಿಗೆ ಶೀಘ್ರವೇ ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಯೋಜನೆ ಸಂಬಂಧ ಗೃಹ ಕಚೇರಿ ಕೃಷ್ಣಾದಲ್ಲಿ ತುಮಕೂರು ಜಿಲ್ಲೆಯ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಮುಖ್ಯಮಂತ್ರಿಯವರು ಮಾಧ್ಯಮ ಪ್ರತಿನಿಧಿಗಳಿಗೆ ಈ ವಿಷಯ ತಿಳಿಸಿದರು. ಪಾವಗಡ, ಚಳ್ಳಕೆರೆ, ಮೊಳಕಾಲ್ಮೂರು, ಕೂಡ್ಲಿಗಿ, ಹೊಸಪೇಟೆ ತಾಲೂಕಿನ … More 2250 ಕೋಟಿ ರೂ. ವೆಚ್ಚದ ಯೋಜನೆಗಳಿಗೆ ಶೀಘ್ರವೇ ಸಿಎಂ ಚಾಲನೆ

ಕುಡಿಯುವ ನೀರು ಪೂರೈಕೆ, ಸಿಎಂ ಅಧ್ಯಕ್ಷತೆಯಲ್ಲಿ ಸಭೆ

ಪಾವಗಡ, ಮೊಳಕಾಲ್ಮೂರು ತಾಲೂಕುಗಳ ಹಾಗೂ ಇತರೆ ಪಟ್ಟಣ ಮತ್ತು ಗ್ರಾಮಗಳ ಕುಡಿಯುವ ನೀರಿನ ಪೂರೈಸುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಸಚಿವರಾದ ಎಚ್ ಕೆ ಪಾಟೀಲ್, ಟಿ ಬಿ ಜಯಚಂದ್ರ ಮತ್ತು ಡಾ ಹೆಚ್ ಸಿ ಮಹದೇವಪ್ಪ ಸಭೆಯಲ್ಲಿ ಉಪಸ್ಥಿತರಿದ್ದರು. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಯಿತು.

ಸಿಎಂ ಜನತಾ ದರ್ಶನ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣಾ ಆವರಣದಲ್ಲಿ ಸಾರ್ವಜನಿಕ ಅಹವಾಲುಗಳನ್ನು ಆಲಿಸಿದರು. ರಾಜ್ಯದ ವಿವಿದೆಡೆಯಿಂದ ಆಗಮಿಸಿದ ಸಾರ್ವಜನಿಕರು ಮುಖ್ಯಮಂತ್ರಿಗಳಿಗೆ ಅಹವಾಲು ಸಲ್ಲಿಸಿದರು.