ನೂತನ ಮೆಗಾ ಡೇರಿ ನಿರ್ಮಾಣಕ್ಕೆ ಸಿಎಂ ಭೂಮಿ ಪೂಜೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೂತನ ಮೆಗಾ ಡೇರಿ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಎ ಮಂಜು, ಎಂ ಕೃಷ್ಣಪ್ಪ, ಹೆಚ್ ಎಂ ರೇವಣ್ಣ ಉಪಸ್ಥಿತರಿದ್ದರು. ಮಂಡ್ಯ ಜಿಲ್ಲೆಯ ಗೆಜ್ಜಲಗೆರೆ ಗ್ರಾಮದಲ್ಲಿ ಮಂಡ್ಯ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ ಕಾರ್ಯಕ್ರಮವನ್ನು ಆಯೋಜಿಸಿತ್ತು.   Advertisements

ಆಶ್ರಯ ಯೋಜನೆ ಸಾಲ ಮನ್ನಾ ಭಾಗ್ಯ ಪತ್ರ ವಿತರಿಸಿದ ಸಿಎಂ

ಮಂಡ್ಯ ನಗರದಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಶ್ರಯ ಯೋಜನೆಯ ಸಾಲ ಮನ್ನಾ ಭಾಗ್ಯ ಪತ್ರವನ್ನು ಫಲಾನುಭವಿಗಳಿಗೆ ವಿತರಿಸಿದರು. ಸಚಿವರಾದ ಎಂ ಕೃಷ್ಣಪ್ಪ ಈ ಸಂದರ್ಭದಲ್ಲಿ ಹಾಜರಿದ್ದರು.

ಮಂಡ್ಯ ವಿವಿಧ ಅಭಿವೃದ್ದಿ ಯೋಜನೆಗಳಿಗೆ ಸಿಎಂ ಚಾಲನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡ್ಯ ನಗರದ ವಿವಿಧ ಅಭಿವೃದ್ದಿ ಯೋಜನೆಗಳಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕೇಂದ್ರ ಪುರಸ್ಕೃತ ಅಮೃತ್ ಯೋಜನೆಯಡಿ ಮಂಡ್ಯ ನಗರ ನೀರು ಸರಬರಾಜು ಯೋಜನೆಯ 3 ನೇ ಹಂತ, ಒಳ ಚರಂಡಿ ವ್ಯವಸ್ಥೆ ಪುನರುಜ್ಜೀವನ ಹಾಗೂ ಉದ್ಯಾನವನ ಅಭಿವೃದ್ದಿ ಯೋಜನೆಗಳಿಗೆ ಮುಖ್ಯಮಂತ್ರಿಗಳು ಶಂಕು ಸ್ಥಾಪನೆ ನೆರವೇರಿಸಿದರು. ಸಚಿವರುಗಳಾದ ಎಂ ಕೃಷ್ಣಪ್ಪ, ಎ ಮಂಜು, ಹೆಚ್ ಎಂ ರೇವಣ್ಣ ಈ ಸಂದರ್ಭದಲ್ಲಿ ಹಾಜರಿದ್ದರು.

ಕೆ ಆರ್ ಎಸ್ ನಿಂದ ನಾಲೆಗಳಿಗೆ ನೀರು ಬಿಡಲಾಗುವುದು

ಕೆ ಆರ್ ಎಸ್ ನಿಂದ ನಾಲೆಗಳಿಗೆ ನೀರು ಬಿಡಲಾಗುವುದು, ತಕ್ಷಣದಲ್ಲೇ ಅಣೆಕಟ್ಟು ನೀರು ಬಿಡುವ ಕುರಿತು ತೀರ್ಮಾನಿಸುತ್ತೇವೆ. ಐಸಿಸಿ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮಹದಾಯಿ ವಿವಾದ ಬಗೆ ಹರಿಸಲು ಕೇಂದ್ರದ ಮಧ್ಯಸ್ಥಿಕೆ ಅಗತ್ಯವಾಗಿದೆ, ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ, ಅನುಮತಿ ಸಿಕ್ಕ ತಕ್ಷಣ ಕೆಲಸ ಪ್ರಾರಂಭಿಸುತ್ತೇವೆ ಎಂದು ಮುಖ್ಯಮಂತ್ರಿಗಳು ಹೇಳಿದರು. ಮಂಡ್ಯ ಜಿಲ್ಲಾ ಪ್ರವಾಸಕ್ಕೆ ಮುಖ್ಯಮಂತ್ರಿಗಳು ಆಗಮಿಸಿದ ಸಂದರ್ಭ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿದರು

ಸಿಎಂ ಜನತಾ ದರ್ಶನ

  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ವಿವಿದೆಡೆಯಿಂದ ಆಗಮಿಸಿದ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ, ಆಲಿಸಿದರು. ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ ಸಾರ್ವಜನಿಕರು ಮುಖ್ಯಮಂತ್ರಿಗಳಿಗೆ ಅಹವಾಲು ಸಲ್ಲಿಸಿದರು.

ಖಾಸಗಿ ಆಸ್ಪತ್ರೆಗಳ ನಿಯಂತ್ರಣ ವಿಧೇಯಕ

ನವೆಂಬರ್ 1 ರಿಂದ ರಾಜ್ಯದ ಎಲ್ಲಾ ಕುಟುಂಬಗಳಿಗೂ ಅನ್ವಯವಾಗುವಂತಹ ಸರ್ವರಿಗೂ ಆರೋಗ್ಯ ಭಾಗ್ಯ ಯೋಜನೆ ಜಾರಿಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ತಿಂಗಳಾಂತ್ಯದೊಳಗೆ ವಿಧಾನ ಮಂಡಳದ ಒಂದು ದಿನದ ಅಧಿವೇಶನ ಕರೆದು ಖಾಸಗಿ ಆಸ್ಪತ್ರೆಗಳ ನಿಯಂತ್ರಣ ತಿದ್ದುಪಡಿ ವಿಧೇಯಕಕ್ಕೆ ಅಂಗೀಕಾರ ಪಡೆಯುವ ಸಾಧ್ಯತೆ ಇದೆ. ಈ ಕುರಿತ ಪತ್ರಿಕಾ ವರದಿ ಇಲ್ಲಿದೆ.

7.57 ಲಕ್ಷ ಬಿಪಿಎಲ್ ಕುಟುಂಬಗಳಿಗೆ ಡಿಸೆಂಬರ್ ನೊಳಗೆ ವಿದ್ಯುತ್ ಸಂಪರ್ಕ

ರಾಜ್ಯದ 7.57 ಲಕ್ಷ ಬಿಪಿಎಲ್ ಕುಟುಂಬದ ಮನೆಗಳಿಗೆ ಡಿಸೆಂಬರ್ ನೊಳಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಇಂಧನ ಇಲಾಖೆ ಮುಂದಾಗಿದೆ. ಜೊತೆಗೆ ವಿದ್ಯುತ್ ಸಂಪರ್ಕ ಇಲ್ಲದ 30 ಗ್ರಾಮಗಳ ವಿದ್ಯುದ್ದೀಕರಣ ಕಾರ್ಯ ಕೈಗೊಳ್ಳುವ ಮೂಲಕ ರಾಜ್ಯದ ಎಲ್ಲಾ ಗ್ರಾಮಗಳಿಗೂ ವಿದ್ಯುತ್ ಸಂಪರ್ಕ ಕಲ್ಪಿಸಲು ಸಜ್ಜಾಗಿದೆ. ಈ ಕುರಿತ ಪತ್ರಿಕಾ ವರದಿ ಇಲ್ಲಿದೆ.