ಮುಕ್ತ ವಿವಿ ಮಾನ್ಯತೆಗೆ ಯುಜಿಸಿ ಜತೆ ಚರ್ಚೆ

ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯಕ್ಕೆ ಮಾನ್ಯತೆ ನೀಡುವ ಸಂಬಂಧ ದಿಲ್ಲಿಗೆ ತೆರಳಿದ ಸಂದರ್ಭ ಯುಜಿಸಿ ಅಧಿಕಾರಿಗಳ ಜತೆ ಮಾತನಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತ ಪತ್ರಿಕಾ ವರದಿ ಇಲ್ಲಿದೆ.   Advertisements

ಬ್ಯಾಂಕಿಂಗ್ ಪರೀಕ್ಷೆ ಕನ್ನಡದಲ್ಲಿ ನಡೆಸುವಂತೆ ಸಿಎಂ ಪ್ರಧಾನಿಗೆ ಪತ್ರ

ಸ್ಪರ್ಧಾತ್ಮಕ ಬ್ಯಾಂಕಿಂಗ್ ಪರೀಕ್ಷೆಗಳನ್ನು ಕನ್ನಡದಲ್ಲಿ ನಡೆಸುವಂತೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ.

ವಿಕಲಚೇತನರಿಗೆ ದ್ವಿಚಕ್ರ ವಾಹನ ವಿತರಣೆ- ಸಿಎಂ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಯಂತ್ರಚಾಲಿತ ದ್ವಿ ಚಕ್ರ ವಾಹನ ಪಡೆದ ವಿಕಲಚೇತನರೊಬ್ಬರು ಹಸ್ತ ಲಾಘವ ಮಾಡಿ ಕೃತಜ್ಞತೆ ಅರ್ಪಿಸಿದರು. ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಕಾರ್ಯಕ್ರಮವನ್ನು ಆಯೋಜಿಸಿತ್ತು.

ಅನುಭವ ಮಂಟಪ ಮರು ನಿರ್ಮಾಣ ವರದಿ ಸಲ್ಲಿಕೆ

ಅನುಭವ ಮಂಟಪದ ಮರು ನಿರ್ಮಾಣದ ಹಿನ್ನೆಲೆಯಲ್ಲಿ ಸರ್ಕಾರ ರಚನೆ ಮಾಡಿದ್ದ ಡಾ. ಗೊ.ರು. ಚನ್ನಬಸಪ್ಪ ನೇತೃತ್ವದ ತಜ್ಞರ ಸಲಹಾ ಸಮಿತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಂದು ತನ್ನ ವರದಿಯನ್ನು ಸಲ್ಲಿಸಿತು. ವರದಿ ಸ್ವೀಕರಿಸಿ ಮಾತನಾಡಿದ ಮುಖ್ಯಮಂತ್ರಿಯವರು, ಅನುಭವ ಮಂಟಪದ ಮರು ನಿರ್ಮಾಣಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು. ತಜ್ಞರ ಸಮಿತಿ ರಚಿಸುವ ನಿರ್ಣಯವನ್ನು ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿ ಸಭೆಯಲ್ಲಿ ಕೈಗೊಳ್ಳಲಾಗಿತ್ತು. ಈಗ ಸಮಿತಿ ನೀಡಿರುವ ವರದಿಯನ್ನು ಸರ್ಕಾರ ಪರಿಶೀಲಿಸಿ, ಮಂಡಳಿ ಸಭೆಯಲ್ಲಿ ಚರ್ಚಿಸಿ ಮುಂದಿನ ಕ್ರಮ … More ಅನುಭವ ಮಂಟಪ ಮರು ನಿರ್ಮಾಣ ವರದಿ ಸಲ್ಲಿಕೆ