ಬೃಹತ್ ಏತ ನೀರಾವರಿ ಯೋಜನೆಗೆ ಸಿಎಂ ಶಂಕುಸ್ಥಾಪನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿಕ್ಕಬಳ್ಳಾಪುರ ಜಿಲ್ಲೆಯ ಹೆಬ್ಬಾಳ-ನಾಗವಾರ ವ್ಯಾಲಿಯ ಬೃಹತ್ ಏತ ನೀರಾವರಿ ಯೋಜನೆಯ ಶಂಕುಸ್ಥಾಪನೆ ನೆರವೇರಿಸಿದರು. ಇದು ಚಿಕ್ಕಬಳ್ಳಾಪುರ ಜಿಲ್ಲೆಯ 44 ಕೆರೆಗಳ ಅಭಿವೃದ್ದಿ ಹಾಗೂ ಬೆಂಗಳೂರು ನಗರ ಹೆಬ್ಬಾಳ ನಾಗವಾರ ಕಣಿವೆಯಲ್ಲಿನ ತ್ಯಾಜ್ಯ ನೀರು ಸಂಸ್ಕರಣಾ ಘಟಕದಿಂದ ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ನಗರ ಗ್ರಾಮಾಂತರ ಜಿಲ್ಲೆಗಳ ವ್ಯಾಪ್ತಿಯ ವಿವಿಧ ಕೆರೆಗಳಿಗೆ ನೀರು ತುಂಬಿಸುವ ಏತ ನೀರಾವರಿ ಯೋಜನೆಯಾಗಿದೆ. ಇದೇ ಸಂದರ್ಭ ಅವರು ತಿಮ್ಮನ ಹಳ್ಳಿಯ ಶ್ರೀ ಕ್ಷೇತ್ರ ಸಪ್ಲಮ್ಮ ದೇವಿ ತಾಯಿ ದೇಗುಲದ ಮಾದರಿ … More ಬೃಹತ್ ಏತ ನೀರಾವರಿ ಯೋಜನೆಗೆ ಸಿಎಂ ಶಂಕುಸ್ಥಾಪನೆ

ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಸಿಎಂ ಚಾಲನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿಕ್ಕಬಳ್ಳಾಪುರ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಆಗಮಿಸಿದ ಸಂದರ್ಭ ಜಿಲ್ಲಾ ಪೊಲೀಸ್ ಗೌರವ ವಂದನೆ ಸ್ವೀಕರಿಸಿದರು. ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರು  ಜಿಲ್ಲೆಯ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ನೀಡಿ, ವೇದಿಕೆ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಸಚಿವರುಗಳಾದ ರಾಮಲಿಂಗಾರೆಡ್ಡಿ, ಟಿ ಬಿ ಜಯಚಂದ್ರ, ಉಮಾಶ್ರೀ ಹಾಜರಿದ್ದರು.    

ಅರೇಕಾ ಬೋರ್ಡ್ ಆರಂಭಿಸುವಂತೆ ರಾಜ್ಯ ಸರ್ಕಾರದಿಂದ ಕೇಂದ್ರಕ್ಕೆ ಮನವಿ

ರಾಜ್ಯ ಸರ್ಕಾರ ಏಲಕ್ಕಿ ಮತ್ತು ಕಾಫಿ ಬೋರ್ಡ್ ಮಾದರಿಯಲ್ಲಿ ಅರೇಕ ಬೋರ್ಡ್ ಆರಂಭಿಸುವಂತೆ ಕೇಂದ್ರವನ್ನು ಕೋರಲು ನಿರ್ಧರಿಸಿದೆ. ಅಡಿಕೆ ಬೆಳೆಗೆ ಉತ್ತಮ ಮಾರುಕಟ್ಟೆ, ಬೆಲೆ ಒದಗಿಸುವುದು ಇದರ ಉದ್ದೇಶವಾಗಿದೆ, ಈ ಕುರಿತ ಪತ್ರಿಕಾ ವರದಿ ಇಲ್ಲಿದೆ.

ಶೀಘ್ರದಲ್ಲೆ ರಾಜ್ಯದಲ್ಲಿ ಇನ್ನೂ ಐದು ‘ಲಾಲ್ ಬಾಗ್’ ನಿರ್ಮಾಣ

ವಿಶ್ವದ ವಿವಿಧ ದೇಶಗಳಲ್ಲಿ ಅಳಿವಿನಂಚಿನಲ್ಲಿರುವ ಸಸ್ಯ ಪ್ರಬೇಧಗಳನ್ನು ಉಳಿಸಿ, ರಕ್ಷಿಸುವ ಸಲುವಾಗಿ ಬೆಂಗಳೂರಿನಲ್ಲಿರುವ ಏಕೈಕ ಜೈವಿಕ ಉದ್ಯಾನವನ ಲಾಲ್ ಬಾಗ್ ಮಾದರಿಯಲ್ಲೇ ರಾಜ್ಯದ ವಿವಿಧ ಭಾಗಗಳಲ್ಲಿ ಮತ್ತೆ ಐದು ಸಸ್ಯ ತೋಟಗಳು ಶೀಘ್ರದಲ್ಲಿ ತಲೆ ಎತ್ತಲಿವೆ. ಈ ಕುರಿತ ಪತ್ರಿಕಾ ವರದಿ ಇಲ್ಲಿದೆ.

ಗಾಂಧಿ ಜಯಂತಿ ದಿನ ಮಾತೃಪೂರ್ಣ ಯೋಜನೆ ಆರಂಭ

ಗರ್ಭಿಣಿಯರು ಮತ್ತು ಬಾಣಂತಿಯರಲ್ಲಿನ ಅಪೌಷ್ಠಿಕತೆ ಮತ್ತು ರಕ್ತ ಹೀನತೆಯನ್ನು ತಡೆಗಟ್ಟಲು ರಾಜ್ಯ ಸರ್ಕಾರ ಮಾತೃಪೂರ್ಣ ಯೋಜನೆಯನ್ನು ಅಕ್ಟೋಬರ್ 2 ರಿಂದ ರಾಜ್ಯದಲ್ಲಿ ಜಾರಿಗೆ ತರಲಿದೆ. ಮಾತೃಪೂರ್ಣ ಯೋಜನೆಯಡಿ ಅಂಗನವಾಡಿಗಳಲ್ಲಿ ಗರ್ಭಿಣಿಯರು ಮತ್ತು ಬಾಣಂತಿಯರಿಗೆ ಪ್ರತಿನಿತ್ಯ ಮದ್ಯಾಹ್ನ 12 ರಿಂದ 2 ಗಂಟೆಯ ವರೆಗೆ ಪೌಷ್ಠಿಕ ಆಹಾರ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಉಮಾಶ್ರೀ ಹೇಳಿದ್ದಾರೆ.

ವಿಶ್ವಕರ್ಮ ಕಲೆಗಳ ಅಧ್ಯಯನಕ್ಕಾಗಿ ಪ್ರತ್ಯೇಕ ವಿಶ್ವವಿದ್ಯಾಲಯ- ಸಿಎಂ

ವಿಶ್ವಕರ್ಮ ಕಲೆಗಳ ಅಧ್ಯಯನಕ್ಕಾಗಿ ಪ್ರತ್ಯೇಕ ವಿಶ್ವವಿದ್ಯಾಲಯ ಸ್ಥಾಪಿಸುವ ಕುರಿತು ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.  

ಮಿಷನ್ 200 ಯೋಜನೆ ಗುರಿ ಮೀರಿ ಸಾಧನೆ

ಕೊಪ್ಪಳ ಜಿಲ್ಲೆಯಲ್ಲಿ ಸೆಪ್ಟಂಬರ್ 8 ರಿಂದ ಸೆಪ್ಟೆಂಬರ್ 16 ರವರೆಗೆ ಹಮ್ಮಿಕೊಂಡ ಮಿಷನ್ 200 ಯೋಜನೆ ಗುರಿ ಮೀರಿ ಸಾಧನೆ ಮಾಡಿದೆ. ಈ ಒಂಬತ್ತು ದಿನಗಳ ಅವಧಿಯ 216 ಗಂಟೆಗಳಲ್ಲಿ 20 ಸಾವಿರ ಶೌಚಾಲಯ ನಿರ್ಮಿಸುವ ಗುರಿ ಇತ್ತು. ಆದರೆ ಅದನ್ನೂ ಮೀರಿ 153 ಗ್ರಾಮ ಪಂಚಾಯ್ತಿಗಳಲ್ಲಿ 21,129 ಶೌಚಾಲಯ ನಿರ್ಮಾಣ ಮಾಡಲಾಗಿದೆ. ಈ ಕುರಿತ ಪತ್ರಿಕಾ ವರದಿ ಇಲ್ಲಿದೆ.