ಗೋವಾ ಕನ್ನಡಿಗರ ಮನೆ ನೆಲಸಮಕ್ಕೆ ಸಿಎಂ ಅಸಮಧಾನ

ಗೋವಾದ ಬೈನಾ ಬೀಚ್‍ನಲ್ಲಿ ಕನ್ನಡಿಗರು ವಾಸಿಸುತ್ತಿದ್ದ ಮನೆಗಳನ್ನು ನೆಲಸಮ ಮಾಡಿರುವ ಅಲ್ಲಿಯ ಸರ್ಕಾರದ ಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಗೋವಾ ಸರ್ಕಾರ ಪದೇ ಪದೇ ಕನ್ನಡಿಗರ ಮೇಲೆ ಈ ರೀತಿಯ ವರ್ತನೆ ತೋರುವುದು ಸರಿಯಲ್ಲ ಎಂದು ಅವರು ಕಿಡಿ ಕಾರಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಯವರು, ಯಾವುದೇ ರಾಜ್ಯದಲ್ಲಿ ಹಲವಾರು ಭಾಷಿಕರು ವಾಸ ಮಾಡುತ್ತಾರೆ. ಗೋವಾದಲ್ಲಿ ಕನ್ನಡಿಗರು, ಕರ್ನಾಟಕದಲ್ಲಿ ಗೋವಾ, ತಮಿಳುನಾಡು, ಆಂಧ್ರದವರು ಇದ್ದಾರೆ. ಅವರೆಲ್ಲರಿಗೂ ರಕ್ಷಣೆ ಕೊಡಬೇಕಾದ್ದು ಯಾವುದೇ ಸರ್ಕಾರದ ಜವಾಬ್ದಾರಿ. … More ಗೋವಾ ಕನ್ನಡಿಗರ ಮನೆ ನೆಲಸಮಕ್ಕೆ ಸಿಎಂ ಅಸಮಧಾನ

ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಸರ್ಕಾರದಿಂದ ಆಚರಣೆಗೆ ಮನವಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಶ್ರೀ ಜಯ ಮೃತ್ಯುಂಜಯ ಸ್ವಾಮಿಗಳು ಭೇಟಿಯಾಗಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಸರ್ಕಾರದಿಂದ ಆಚರಿಸುವಂತೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಸಚಿವರಾದ ವಿನಯ ಕುಲಕರ್ಣಿ ಹಾಜರಿದ್ದರು.

ಪರಿಶಿಷ್ಠ ಜಾತಿಯ ವಿದ್ಯಾರ್ಥಿಗಳ ಪರ್ವತಾರೋಹಣ ತರಬೇತಿಗೆ ಸಿಎಂ ಚಾಲನೆ

ಮೆಟ್ರಿಕ್ ನಂತರದ ಹಾಸ್ಟೆಲ್‍ಗಳ, ಪರಿಶಿಷ್ಟ ಜಾತಿಯ 60 ವಿದ್ಯಾರ್ಥಿಗಳ ಪರ್ವತಾರೋಹಣ ತರಬೇತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಚಾಲನೆ ನೀಡಿದರು. ವಿಧಾನಸೌಧ ಮುಂಭಾಗದ ಮೆಟ್ಟಿಲುಗಳ ಮೇಲೆ ಆಯೋಜಿಸಿದ್ದ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಕಿಟ್‍ಗಳನ್ನು ವಿತರಿಸುವ ಮೂಲಕ ಮುಖ್ಯಮಂತ್ರಿಯವರು ತರಬೇತಿಗೆ ಚಾಲನೆ ನೀಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಯವರು, ವಿದ್ಯಾರ್ಥಿಗಳಲ್ಲಿ ಅಡಗಿರುವ ಸುಪ್ತ ಪ್ರತಿಭೆ ಮತ್ತು ಸಾಹಸೀ ಪ್ರವೃತ್ತಿಯನ್ನು ಗುರುತಿಸಿ ಪ್ರೋತ್ಸಾಹಿಸಲು ಸರ್ಕಾರ ಈ ವಿನೂತನ ಯೋಜನೆ ಜಾರಿಗೆ ತಂದಿದೆ. ಆಯ್ಕೆಯಾಗಿರುವ ಎಲ್ಲ ವಿದ್ಯಾರ್ಥಿಗಳಿಗೆ ಹಿಮಾಚಲ ಪ್ರದೇಶದ … More ಪರಿಶಿಷ್ಠ ಜಾತಿಯ ವಿದ್ಯಾರ್ಥಿಗಳ ಪರ್ವತಾರೋಹಣ ತರಬೇತಿಗೆ ಸಿಎಂ ಚಾಲನೆ

ಪುನೀತ ಯಾತ್ರೆಗೆ ಸಿಎಂ ಚಾಲನೆ

ರಾಜ್ಯ ಮತ್ತು ಹೊರ ರಾಜ್ಯಗಳ ಪ್ರಮುಖ ಧಾರ್ಮಿಕ, ಐತಿಹಾಸಿಕ, ಪಾರಂಪರಿಕ ಸ್ಥಳಗಳಿಗೆ ರಿಯಾಯಿತಿ ದರದಲ್ಲಿ ಎಲ್ಲ ಧರ್ಮದ ಪ್ರವಾಸಿಗರನ್ನು ಕರೆದೊಯ್ಯುವ “ಪುನೀತ ಯಾತ್ರೆ”ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಚಾಲನೆ ನೀಡಿದರು. ರಾಜ್ಯ ಪ್ರವಾಸೋದ್ಯಮ ಇಲಾಖೆ ಮತ್ತು ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಸಹಭಾಗಿತ್ವದಲ್ಲಿ ರೂಪಿಸಿರುವ ಪುನೀತ ಯಾತ್ರೆಗೆ ವಿಧಾನಸೌಧೌದ ಸಮಿತಿ ಕೊಠಡಿಯಲ್ಲಿ ಚಾಲನೆ ನೀಡಿದ ಮುಖ್ಯಮಂತ್ರಿಯವರು, ಯಾತ್ರಾರ್ಥಿಗಳಿಗೆ ಶುಭ ಕೋರಿದರು. ಈ ಹೊಸ ಯೋಜನೆ ಯಶಸ್ವಿಯಾಗಲಿ, ಎಲ್ಲರೂ ಸದುಪಯೋಗಪಡಿಸಿಕೊಳ್ಳಲಿ ಎಂದು ಹಾರೈಸಿದರು. ಪ್ರವಾಸವನ್ನು ಎರಡು ಹಂತದಲ್ಲಿ … More ಪುನೀತ ಯಾತ್ರೆಗೆ ಸಿಎಂ ಚಾಲನೆ

ಕೃಷಿ ಯಂತ್ರ ಬಾಡಿಗೆಯಾಧಾರಿತ ಕೇಂದ್ರ ಸ್ಥಾಪನೆಗೆ ನಿರ್ಧಾರ

ರಾಜ್ಯದಲ್ಲಿ ಈಗಾಗಲೇ 324 ಹೋಬಳಿ ಕೇಂದ್ರಗಳಲ್ಲಿ ಕೃಷಿ ಯಂತ್ರ ಬಾಡಿಗೆಯಾಧಾರಿತ ಕೇಂದ್ರಗಳನ್ನು ಸ್ಥಾಪಿಸಿ, ರೈತರಿಗೆ ಕೃಷಿ ಯಂತ್ರಗಳನ್ನು ಅತ್ಯಂತ ಕಡಿಮೆ ದರದಲ್ಲಿ ಬಾಡಿಗೆ ನೀಡುವ ಮೂಲಕ ನೆರವಿಗೆ ಧಾವಿಸಲಾಗುತ್ತಿದೆ. ಈ ವರ್ಷ ಹೊಸದಾಗಿ 250 ಕೃಷಿ ಯಂತ್ರ ಬಾಡಿಗೆಯಾಧಾರಿತ ಕೇಂದ್ರಗಳು ಸ್ಥಾಪಿಸಲು ನಿರ್ಧರಿಸಲಾಗಿದೆ. ಇದಕ್ಕೆ ಸರಕಾರದಿಂದ ಅನುಮತಿ ಸಿಕ್ಕಿದ್ದು, ಅನುದಾನವು ಬಿಡುಗಡೆಯಾಗಿದೆ ಎಂದು ಕೃಷಿ ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಳ್ಳಿ ವಿಧಾನಸಭಾ ಕ್ಷೇತ್ರದ ಮರಿಯಮ್ಮನಳ್ಳಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ಕೃಷಿ ಯಂತ್ರ ಬಾಡಿಗೆಯಾಧಾರಿತ ಕೇಂದ್ರದ … More ಕೃಷಿ ಯಂತ್ರ ಬಾಡಿಗೆಯಾಧಾರಿತ ಕೇಂದ್ರ ಸ್ಥಾಪನೆಗೆ ನಿರ್ಧಾರ

ಹೆಚ್ ಎಸ್ ದೊರೆಸ್ವಾಮಿ ಗೆ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರಕಟ

ಕರ್ನಾಟಕ ರಾಜ್ಯ ಸರ್ಕಾರ ನೀಡುವ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಕರ್ನಾಟಕ -2017 ಪ್ರಶಸ್ತಿಗೆ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್ ಎಸ್ ದೊರೆಸ್ವಾಮಿ ಅವರನ್ನು ಆಯ್ಕೆಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮುಖಾಂತರ ಕಳೆದ ನಾಲ್ಕು ವರ್ಷಗಳಿಂದ ಈ ಪ್ರಶಸ್ತಿಯನ್ನು ನೀಡುತ್ತಾ ಬಂದಿದೆ. 20017 ನೇ ಸಾಲಿನ ಪ್ರಶಸ್ತಿಗೆ ಹೆಚ್ ಎಸ್ ದೊರೆಸ್ವಾಮಿ ಅವರು ಆಯ್ಕೆಯಾಗಿದ್ದು, ಪ್ರಶಸ್ತಿ ಪ್ರದಾನ ಸಮಾರಂಭವನ್ನು ರಾಷ್ಟ್ರಪಿತ ಮಹಾತ್ಮ ಗಾಂಧಿ ಜಯಂತಿ ಅಕ್ಟೋಬರ್ 2 ರಂದು … More ಹೆಚ್ ಎಸ್ ದೊರೆಸ್ವಾಮಿ ಗೆ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರಕಟ

ಮೈಸೂರು ದಸರಾ ಗೆ ಏರ್ ಶೋ ಮೆರುಗು

ಮೈಸೂರು ದಸರಾ ಮಹೋತ್ಸವಕ್ಕೆ ಈ ಬಾರಿ ಏರ್ ಶೋ ವಿಶೇಷ ಮೆರುಗು ನೀಡಲಿದೆ. ಮೈಸೂರಿನಲ್ಲಿ ಏರ್ ಶೋ ನಡೆಸಲು ಒಪ್ಪಿಗೆ ಸಿಕ್ಕಿದೆ. ಸೆಪ್ಟೆಂಬರ್ 29 ರಂದು ಬೆಳಗ್ಗೆ 11 ಗಂಟೆಗೆ ಏರ್ ಶೋ ಉದ್ಘಾಟನೆಯಾಗಲಿದೆ. ದಸರಾ ಸಂದರ್ಭದಲ್ಲಿ ಮೈಸೂರಿನಲ್ಲಿ ಏರ್ ಶೋ ನಡೆಸುವಂತೆ ಇತ್ತೀಚೆಗೆ ದೆಹಲಿಗೆ ಹೋಗಿದ್ದಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಕ್ಷಣಾ ಸಚಿವರಾದ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಮಾಡಿದ್ದರು.